ADVERTISEMENT

ಅದಮಾರು: ಸಂವಿಧಾನ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 2:47 IST
Last Updated 27 ನವೆಂಬರ್ 2022, 2:47 IST
ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು
ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು   

ಪಡುಬಿದ್ರಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆದೇಶದಂತೆ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮತದಾರರ ಸಾಕ್ಷರತಾ ಸಂಘ, ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಶನಿವಾರ ಸಂವಿಧಾನ ದಿನವನ್ನು ಆಚರಿಸಲಾಯಿತು.

ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ವೈ. ಜ್ಯೋತೀಂದ್ರನಾಥ್ ರಾವ್ ರವರು ‘ಭಾರತ-ಪ್ರಜಾಪ್ರಭುತ್ವದ ತಾಯಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸಂವಿಧಾನದ ಮೌಲ್ಯ, ಆಶಯದ ಕುರಿತು ಮಾತನಾಡಿದರು. ‌‌

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಜೀವ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಉಪನ್ಯಾಸಕ ಡಾ. ಜಯಶಂಕರ್ ಕಂಗಣ್ಣಾರು, ಮತದಾರರ ಸಾಕ್ಷರತಾ ಸಂಘದ ಪ್ರತಿನಿಧಿ, ಉಪನ್ಯಾಸಕ ವಿಜಯೇಂದ್ರ ಕುಮಾರ್, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ್ ರಾವ್ ಹಾಗೂ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.