ಪಡುಬಿದ್ರಿ: ‘ಕುಡಿತದ ಚಟದಿಂದ ಬದುಕನ್ನು ಕಳೆದುಕೊಳ್ಳಬೇಕಾಗುತ್ತದೆ. ಇದರಿಂದ ದೂರವಿದ್ದಲ್ಲಿ ಬದುಕು ಹಸನಾಗುತ್ತದೆ. ಆತ್ಮವಿಶ್ವಾಸ ಬೆಳೆಸಿಕೊಂಡು ಹೊಸ ಬದುಕನ್ನು ಕಟ್ಟಿಕೊಳ್ಳಿ’ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರೆ ಹೇಳಿದರು.
ಹೆಜಮಾಡಿ ಶ್ರೀನಾರಾಯಣಗುರು ಸಭಾಭವನದಲ್ಲಿ ಕಾಪು ತಾಲ್ಲೂಕು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಬುಧವಾರ ನಡೆದ 8 ದಿನದ 1951ನೇ ಮದ್ಯವರ್ಜನ ಶಿಬಿರದ ನವಜೀವನ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮುಖಂಡ ವಿನಯ ಕುಮಾರ್ ಸೊರಕೆ ಮಾತನಾಡಿ, ಮದ್ಯಪಾನದಿಂದ ಗೌರವ ಕಳೆದುಕೊಳ್ಳುವುದರೊಂದಿಗೆ ವ್ಯಕ್ತಿತ್ವಕ್ಕೆ ಧಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ಈ ದುಶ್ಚಟದಿಂದ ಮುಕ್ತರಾಗಿ ಸಮಾಜದಲ್ಲಿ ಗೌರವಯುತವಾಗಿ ಬದಕಲು ಹೊಸ ಜೀವನ ಆರಂಭಿಸಿ. ಕುಟುಂಬದ ನಿರೀಕ್ಷೆ ಹುಸಿಗೊಳಿಸದಿರಿ ಎಂದು ಹೇಳಿದರು.
ಸಮಿತಿಯ ಗೌರವಾಧ್ಯಕ್ಷ ದಯಾನಂದ ಹೆಜಮಾಡಿ ಅಧ್ಯಕ್ಷತೆ ವಹಿಸಿದ್ದರು. ಶಿಬಿರವನ್ನು ಯಶಸ್ವಿಯಾಗಿ ಮುನ್ನಡೆಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅವರನ್ನು ಸನ್ಮಾನಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟಬಲ್ ಟ್ರಸ್ಟ್, ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ, ಹೆಜಮಾಡಿ ಗ್ರಾಮ ಪಂಚಾಯಿತಿ, ಹೆಜಮಾಡಿ ಬಿಲ್ಲವರ ಸಂಘ, ಹಾಲು ಉತ್ಪಾದಕರ ಸಂಘ, ಕರಾವಳಿ ಯುವಕ ಯುವತಿ ವೃಂದ, ಜೈಕರ್ನಾಟಕ ಯುವ ಸಂಸ್ಥೆಗಳ ಸಹಯೋಗದೊಂದಿಗೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ನಡೆದ ಶಿಬಿರದಲ್ಲಿ 65ಕ್ಕೂ ಅಧಿಕ ಮಂದಿ ಶಿಬಿರಾರ್ಥಿಗಳಾಗಿದ್ದರು.
ಜಿಲ್ಲಾ ಸಂಘಟನಾ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಕಾಪು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ದಿವಾಕರ ಶೆಟ್ಟಿ, ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿ.ಪಂ. ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಷ್ಮಾ ಎ. ಮೆಂಡನ್, ಜನಜಾಗೃತಿ ವೇದಿಕೆ ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ನವೀನ್ ಅಮೀನ್, ಸದಸ್ಯರಾದ ಉದಯ ಕುಮಾರ್ ಶೆಟ್ಟಿ ಇನ್ನಾ, ಸುಧಾಕರ ಕರ್ಕೇರ, ಹೆಜಮಾಡಿ ಒಕ್ಕೂಟದ ಅಧ್ಯಕ್ಷೆ ಆಶಾ ಪ್ರಾಣೇಶ್, ಗಣೇಶ್ ಆಚಾರ್ಯ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಪ್ರಮುಖರಾದ ರಾಘವೇಂದ್ರ ಶೆಟ್ಟಿ, ನಾಗರಾಜ ಶೆಟ್ಟಿ, ಮೋಹನ್, ಶಂಕರ್ ಸೂಡ, ವಿದ್ಯಾಧರ್ ಭಾಗವಹಿಸಿದ್ದರು. ಎಸ್‌ಕೆಡಿಆರ್‌ಡಿಪಿ ಕಾಪು ತಾಲ್ಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಸ್ವಾಗತಿಸಿದರು. ಗಣೇಶ್ ಅಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.