ADVERTISEMENT

ಮಣಿಪಾಲ ಕೆಎಂಸಿಯಲ್ಲಿ ಎಲ್ಲ ಸೇವೆಗಳು ಆರಂಭ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 17:57 IST
Last Updated 18 ಜೂನ್ 2021, 17:57 IST

ಉಡುಪಿ: ಜೂನ್ 21ರಿಂದ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗಗಳು ಬೆಳಿಗ್ಗೆ 8ರಿಂದ 5ರವರೆಗೆ ತೆರೆದಿರಲಿದೆ. ಇದರ ಜತೆಗೆ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು, ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳ ಸೇವೆ ಸಾರ್ವಜನಿಕರಿಗೆ ಸಿಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.

ಎಲ್ಲ ರೀತಿಯ ಶಸ್ತ್ರ ಚಿಕಿತ್ಸಾ ಸೌಲಭ್ಯ ಕೂಡ ರೋಗಿಗಳಿಗೆ ದೊರೆಯಲಿದೆ. ಆದರೆ, ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ದಾಖಲಾಗಲು ಕೋವಿಡ್ -19 ಪರೀಕ್ಷೆ (ಆರ್‌ಟಿಪಿಸಿಆರ್‌) ಕಡ್ಡಾಯ. ಊರಿನಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆಗಳವರೆಗೆ ಮಾತ್ರ ವರದಿ ಊರ್ಜಿತವಾಗಿರುತ್ತದೆ. ಕೋವಿಡ್ ಪರೀಕ್ಷೆ ಮಾಡಿಸಿಲ್ಲವಾದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ದಾಖಲಾಗುವ ಮೊದಲು ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಲಾಗುವುದು.

ಆಸ್ಪತ್ರೆಗೆ ಬರುವ ರೋಗಿಗಳು ಹೊರಾಂಗಣದಲ್ಲಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲ ರೋಗಿಗಳು ಹಾಗೂ ಆಸ್ಪತ್ರೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರೋಗಿಯ ಜತೆಗೆ ಒಬ್ಬ ಸಹಾಯಕರಿಗೆ ಮಾತ್ರ ಆಸ್ಪತ್ರೆಯೊಳಗೆ ಅವಕಾಶವಿದೆ ಎಂದು ಅಧೀಕ್ಷಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.