ADVERTISEMENT

ಕೆಂಎಂಸಿ: ಎರಡೂವರೆ ವರ್ಷದ ಬಾಲಕಿಗೆ ಯಶಸ್ವಿ ಅಲೋಜೆನಿಕ್ ಅಸ್ಥಿಮಜ್ಜೆಯ ಕಸಿ

ಕರಾವಳಿ ಕರ್ನಾಟಕದಲ್ಲಿ ಕೆಂಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 15:53 IST
Last Updated 8 ಫೆಬ್ರುವರಿ 2022, 15:53 IST
ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ವೈದ್ಯರ ತಂಡ ರೋಗನಿರೋಧಕ ಅಸ್ವಸ್ಥತೆಯಿಂದ (ಹಿಮೋಫಾಗೊಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್) ಬಳಲುತ್ತಿದ್ದ ಬಾಲಕಿಗೆ ಯಶಸ್ವಿ ಅಲೋಜೆನಿಕ್ ಅಸ್ಥಿಮಜ್ಜೆಯ ಕಸಿ ಮಾಡಲಾಗಿದೆ.
ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ವೈದ್ಯರ ತಂಡ ರೋಗನಿರೋಧಕ ಅಸ್ವಸ್ಥತೆಯಿಂದ (ಹಿಮೋಫಾಗೊಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್) ಬಳಲುತ್ತಿದ್ದ ಬಾಲಕಿಗೆ ಯಶಸ್ವಿ ಅಲೋಜೆನಿಕ್ ಅಸ್ಥಿಮಜ್ಜೆಯ ಕಸಿ ಮಾಡಲಾಗಿದೆ.   

ಉಡುಪಿ: ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ವೈದ್ಯರ ತಂಡ ರೋಗನಿರೋಧಕ ಅಸ್ವಸ್ಥತೆಯಿಂದ (ಹಿಮೋಫಾಗೊಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್) ಬಳಲುತ್ತಿದ್ದ ಬಾಲಕಿಗೆ ಯಶಸ್ವಿ ಅಲೋಜೆನಿಕ್ ಅಸ್ಥಿಮಜ್ಜೆಯ ಕಸಿ ಮಾಡಿದೆ.

ಚಿತ್ರದುರ್ಗದ ಎರಡೂವರೆ ವರ್ಷದ ಬಾಲಕಿಗೆ ಜ್ವರ ಮತ್ತು ದುಗ್ಧರಸ ಗ್ರಂಥಿಗಳ ಹಿಗ್ಗುವಿಕೆ ಸಮಸ್ಯೆ ಕಾಡುತ್ತಿತ್ತು. ಹೆಚ್ಚಿನ ಚಿಕಿತ್ಸೆಗೆ ಆಕೆಯನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಿಕೊಂಡು ತಪಾಸಣೆ ಮತ್ತು ರೋಗ ಮೌಲ್ಯಮಾಪನದ ನಂತರ ಬಾಲಕಿಯಲ್ಲಿ ರೋಗನಿರೋಧಕ ಅಸ್ವಸ್ಥತೆ (ಇಮ್ಯೂನ್ ಡಿಸಾರ್ಡರ್) ಇರುವುದು ಪತ್ತೆಯಾಯಿತು.

ಅಸ್ಥಿಮಜ್ಜೆಯ ಕಸಿ ಮಾತ್ರ ರೋಗ ಗುಣಪಡಿಸುವ ಚಿಕಿತ್ಸೆಯ ಆಯ್ಕೆಯಾಗಿದ್ದರಿಂದ ಬಾಲಕಿಯ ತಂದೆಯ 10/10 ಎಚ್‌ಎಲ್‌ಎ ಬಳಸಿಕೊಂಡು ಚಿಕಿತ್ಸೆ ನೀಡಲಾಯಿತು. ಅಸ್ಥಿಮಜ್ಜೆಯ ಕಸಿ ಯಶಸ್ವಿಯಾಗಿ ನಡೆಯಿತು.

ADVERTISEMENT

ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಡಾ. ವಾಸುದೇವ ಭಟ್ ನೇತೃತ್ವದಲ್ಲಿ ಯಶಸ್ವಿ ಕಸಿ ಚಿಕಿತ್ಸೆ ನಡೆಸಲಾಯಿತು. ಡಾ.ಎಂ.ವಿ.ಅರ್ಚನಾ, ಡಾ.ಕುಲಶೇಖರ್, ಡಾ.ರಮಿತಾ ಆರ್.ಭಟ್, ಮತ್ತು ಡಾ.ಅತುಲ್ ಅಚ್ಯುತರಾವ್ ತಂಡದಲ್ಲಿ ಇದ್ದರು. ಡಾ. ಶಮೀ ಶಾಸ್ತ್ರಿ ನೇತೃತ್ವದ ರಕ್ತನಿಧಿಯ ವೈದ್ಯರ ತಂಡವು ಅಸ್ಥಿಮಜ್ಜೆಯ ಕಸಿಗೆ ಸಹಕರಿಸಿತು.

ಕುಟುಂಬಕ್ಕೆ ಹಣಕಾಸಿನ ಸಮಸ್ಯೆ ಇದ್ದರಿಂದ ದಾನಿಗಳು, ಎನ್‌ಜಿಒ ಸೇರಿದಂತೆ ‘ಸೇವ್ ಎ ಲೈಫ್’ ಚಾರಿಟಬಲ್ ಟ್ರಸ್ಟ್‌ ಆರ್ಥಿಕ ನೆರವು ನೀಡಿತು. ಬಾಲಕಿಯು ಗುಣಮುಖವಾಗಿದ್ದು, ಶಾಲೆಗೆ ದಾಖಲಾಗಿದ್ದಾಳೆ.

ದೇಶದಲ್ಲಿ ಅಸ್ಥಿಮಜ್ಜೆ ಕಸಿ ಸೇವೆಗಳ ಅವಶ್ಯಕತೆ ಹೆಚ್ಚಿದ್ದು, ಪ್ರತಿ ವರ್ಷ ಕನಿಷ್ಠ 10,000 ಕಸಿ ಅಗತ್ಯವಿದ್ದು, 2,500 ಕಸಿಗಳನ್ನು ಮಾತ್ರ ಮಾಡಲಾಗುತ್ತದೆ ಎಂದು ಕೆಎಂಸಿ ಮಕ್ಕಳ ಅಸ್ಥಿಮಜ್ಜೆ ಕಸಿ ವೈದ್ಯ ಡಾ.ಎಂ.ವಿ. ವಿನಯ್ ಹೇಳಿದರು.

ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮಾತನಾಡಿ, ‘ಡಾ. ವಾಸುದೇವ ಭಟ್ ನೇತೃತ್ವದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಜಿ ವಿಭಾಗ ಮಕ್ಕಳಲ್ಲಿ ಅಸ್ಥಿಮಜ್ಜೆ ಕಸಿ ಸೇರಿದಂತೆ ಸಂಕೀರ್ಣ ಹೆಮಟೊಲಾಜಿಕಲ್ (ರಕ್ತಶಾಸ್ತ್ರ), ಆಂಕೊಲಾಜಿಕಲ್ ಅಸ್ವಸ್ಥತೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ಕರಾವಳಿಯಲ್ಲಿ ಮೊದಲ ಬಾರಿಗೆ ಕೆಎಂಸಿಯಲ್ಲಿ ಯಶಸ್ವಿಯಾಗಿ ಅಸ್ಥಿಮಜ್ಜೆ ಕಸಿ ನಡೆದಿದೆ’ ಎಂದು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.