
ಉಡುಪಿ: ಮಂಗಳೂರು ವಿ.ವಿ. ಮತ್ತು ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 45ನೇ ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು 472 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಉಜಿರೆಯ ಎಸ್.ಡಿ.ಎಂ. ಕಾಲೇಜು ದ್ವಿತೀಯ ಸ್ಥಾನ ಮತ್ತು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ಶ್ರೇಷ್ಠ ಅಥ್ಲೆಟಿಕ್ ಆಗಿ ಮಹಿಳಾ ವಿಭಾಗದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ದೀಕ್ಷಿತಾ ರಾಮಕೃಷ್ಣ ಗೌಡ ಮತ್ತು ಪುರುಷರ ವಿಭಾಗದಲ್ಲಿ ತೆಂಕನೆಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಧನುಷ್ ಕುಡ್ತಾನ್ ಆಯ್ಕೆಯಾದರು.
ಮಹಿಳಾ ವಿಭಾಗದ ಚಾಂಪಿಯನ್‍ಶಿಪ್‌ನಲ್ಲಿ ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜು ಟ್ರಸ್ಟ್ ಅಧ್ಯಕ್ಷ ವಿವೇಕ್ ಆಳ್ವ, ಕಾರ್ತಿಕ್ ಎಸ್ಟೇಟ್‍ನ ಮಾಲಕರು ಹರಿಯಪ್ಪ ಕೋಟ್ಯಾನ್, ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಜೆರಾಲ್ಡ್ ಸಂತೋಷ್ ಡಿಸೋಜ, ಡಾ ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ., ಕೃಷ್ಣ ಭಟ್, ಶ್ರೀಮತಿ ಅಡಿಗ, ರಾಜೇಂದ್ರ ಕೆ., ರಾಮಚಂದ್ರ ಪಾಟ್ಕರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.