ambulance carrying Vikram Gowda's dead body met with an accident near udupi
ಉಡುಪಿ: ಹೆಬ್ರಿಯ ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆಂಬುಲೆನ್ಸ್ ರಸ್ತೆಬದಿಗೆ ವಾಲಿದೆ.
ಅತಿ ವೇಗದಿಂದ ಸಂಚರಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಬದಿಗೆ ವಾಲಿದ್ದು, ಅದರಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಬಳಿಕ ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
‘ಆಂಬುಲೆನ್ಸ್ ವೇಗವಾಗಿ ಸಂಚರಿಸುತ್ತಿದ್ದಾಗ ದಿಢೀರನೆ ದನ ರಸ್ತೆಗೆ ಅಡ್ಡ ಬಂದಿದೆ, ಇದರಿಂದಾಗಿ ಆಂಬುಲೆನ್ಸ್ ರಸ್ತೆ ಬದಿಗೆ ಸರಿದಿದೆ. ಯಾರಿಗೂ ಗಾಯಗಳಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.