ADVERTISEMENT

ಅಮೃತ ಮಹೋತ್ಸವ: ಕಾಂಗ್ರೆಸ್‌ನಿಂದ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:15 IST
Last Updated 7 ಆಗಸ್ಟ್ 2022, 7:15 IST
ಹೆಬ್ರಿ ಸಮೀಪದ ಕುಚ್ಚೂರು ಶಾಂತಿನಿಕೇತನ ಯುವ ವೃಂದದ ವಿದ್ಯಾರ್ಥಿ ಘಟಕದ ಸಹಭಾಗಿತ್ವದಲ್ಲಿ ಭಾನುವಾರ ನಡೆದ ಜ್ಞಾನ ದೀವಿಗೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮೂಡುಬಿದರೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ನಿತ್ಯಾನಂದ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಕುಂದಾಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆಯುವ ಪಾದಯಾತ್ರೆಯನ್ನು ಕಾಂಗ್ರೆಸ್ ಮುಖಂಡ ಕೆ. ಪ್ರತಾಪಚಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 9.30ಕ್ಕೆ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪಾದಯಾತ್ರೆಯ ಉದ್ಘಾಟನೆ ನಡೆಯಲಿದೆ. ನಂತರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗುವ ಯಾತ್ರೆ ತೆಕ್ಕಟ್ಟೆಯ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಸಮಾಪನಗೊಳ್ಳಲಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕುಮಾರ ಕೊಡವೂರು ಸೇರಿದಂತೆ ಪಕ್ಷದ ಪ್ರಮುಖರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ
ಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.