
ಹೆಬ್ರಿ: ದೇಶದಲ್ಲಿ ಬುದ್ಧಿವಂತರ ಸಂಖ್ಯೆ ಹೆಚ್ಚಾದಂತೆ ಅಪರಾಧ ಪ್ರಮಾಣ ಹೆಚ್ಚಾಗಿದೆ. ನಾಗರಿಕ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಂಸ್ಕಾರ ಇಲ್ಲದಿರುವುದು ಇದಕ್ಕೆ ಕಾರಣ. ಆದರೆ ಅಮೃತ ಭಾರತಿಯು ಸಂಸ್ಕಾರ ಶಿಕ್ಷಣ ನೀಡಿ, ರಾಷ್ಟ್ರಭಕ್ತರನ್ನು ನಿರ್ಮಾಣ ಮಾಡುವ ಕೆಲಸ ಮಾಡುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹೆಬ್ರಿಯ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ ಶೆಣೈ ಮಾತನಾಡಿ, ಜೀವನ ಕೌಶಲದೊಂದಿಗೆ, ಸಂಸ್ಕಾರಯುತ ವಿದ್ಯಾರ್ಥಿಗಳನ್ನು ರಾಷ್ಟ್ರಕ್ಕೆ ಸಂಸ್ಥೆಯು ನೀಡಿದೆ. ಪ್ರತಿ ವರ್ಷ ಸುಮಾರು 50 ಲಕ್ಷದಷ್ಟು ವಿದ್ಯಾರ್ಥಿವೇತನವನ್ನು ಬಡ ವಿದ್ಯಾರ್ಥಿಗಳ ನೀಡುತ್ತಿದ್ದೇವೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಂಸ್ಥೆ ನಿರಂತರವಾಗಿ ತೊಡಗಿಕೊಂಡಿದೆ. ಅಂದು ಸಮಾನ ಮನಸ್ಕರು ಸೇರಿ ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಸ್ಥಾಪಿಸಿದ ಸಂಸ್ಥೆ ಇಂದು ಉನ್ನತಿಯಾಗಿದೆ ಎಂದರು.
ಸಾಧಕ ಹಳೆ ವಿದ್ಯಾರ್ಥಿಗಳಾದ ವಿದುಷಿ ದೀಕ್ಷಾ ವಿ, ಮಾನ್ಯ ರಮೇಶ್, ಶೈಕ್ಷಣಿಕ, ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ರವಿ ರಾವ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕಾಧ್ಯಕ್ಷ ಹೆಬ್ರಿ ಸತೀಶ ಪೈ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ ನಾಯಕ್, ವಿಶ್ವಸ್ಥರಾದ ಬಾಲಕೃಷ್ಣ ಮಲ್ಯ, ಶೈಲೇಶ ಕಿಣಿ, ಯೋಗೀಶ ಭಟ್, ದಿನೇಶ ಪೈ, ಗಣೇಶ ಕಿಣಿ ಬೆಳ್ವೆ, ಸುಧೀರ ನಾಯಕ್, ಭಾಸ್ಕರ ಜೋಯಿಸ್, ವಿಷ್ಣುಮೂರ್ತಿ ನಾಯಕ್, ಲಕ್ಷ್ಮಣ ಭಟ್, ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್, ಅಪರ್ಣ ಆಚಾರ್, ಅನಿತಾ, ಶಕುಂತಲಾ, ಪಿ.ಆರ್.ಒ ವಿಜಯಕುಮಾರ್ ಶೆಟ್ಟಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.