ಉಡುಪಿ: ಕೋಮು ಸಂಘರ್ಷ ನಿಗ್ರಹಿಸುವ ನಿಟ್ಟಿನಲ್ಲಿ ಹೊಸದಾಗಿ ರಚಿಸಿರುವ ವಿಶೇಷ ಕಾರ್ಯ ಪಡೆಯ ವ್ಯಾಪ್ತಿಗೆ ಉಡುಪಿ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವು ಉಡುಪಿ ಜಿಲ್ಲೆಯ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ. ಉಡುಪಿ ಜಿಲ್ಲೆಯನ್ನು ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಹಲವು ದಶಕಗಳಿಂದ ಯಾವುದೇ ಕೋಮು ಸಂಘರ್ಷದ ಘಟನೆಗಳು ಉಡುಪಿ ಜಿಲ್ಲೆಯಲ್ಲಿ ವರದಿಯಾಗಿಲ್ಲ. ರಾಜ್ಯ ಸರ್ಕಾರ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆಯದೆ, ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ಈ ಕಾರ್ಯಪಡೆಯನ್ನು ಉಡುಪಿ ಜಿಲ್ಲೆಯ ಜನತೆಯ ಮೇಲೆ ಹೇರಿದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷ ಕಾರ್ಯಪಡೆಯ ವ್ಯಾಪ್ತಿಯಿಂದ ಉಡುಪಿ ಜಿಲ್ಲೆಯನ್ನು ತಕ್ಷಣ ಕೈಬಿಡಬೇಕು. ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ವಿಶೇಷ ಕಾರ್ಯಪಡೆಯ ಔಚಿತ್ಯವನ್ನು ಪುನರ್ ವಿಮರ್ಶೆ ಮಾಡಿ ರದ್ದು ಮಾಡಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.