ADVERTISEMENT

ಉಡುಪಿ| ಬೇಡಿಕೆಗಳ ಈಡೇರಿಕೆಗೆ ಮೀನುಗಾರರ ಮನವಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 14:07 IST
Last Updated 19 ಮಾರ್ಚ್ 2023, 14:07 IST
ಮಲ್ಪೆಯಲ್ಲಿ ಭಾನುವಾರ ನಡೆದ ಸಾಗರ ಪರಿಕ್ರಮ ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಫಲಾನುಭವಿಗೆ ಸವಲತ್ತು ವಿತರಿಸಿದರು.
ಮಲ್ಪೆಯಲ್ಲಿ ಭಾನುವಾರ ನಡೆದ ಸಾಗರ ಪರಿಕ್ರಮ ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಫಲಾನುಭವಿಗೆ ಸವಲತ್ತು ವಿತರಿಸಿದರು.   

ಉಡುಪಿ: ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಅವರಿಗೆ ಮಲ್ಪೆ ಬಂದರಿನಲ್ಲಿರುವ ಮೀನುಗಾರರ ಸಂಘದಲ್ಲಿ ಮನವಿ ಸಲ್ಲಿಸಲಾಯಿತು.

ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ನೀಡಲು ಬಿಪಿಎಲ್ ಕಾರ್ಡ್ ಪರಿಗಣನೆ ಮಾಡದ ಬಗ್ಗೆ ಕ್ರಮ ಜರುಗಿಸಬೇಕು, ಬೋಟ್‌ಗಳಿಗೆ ರೋಡ್ ಸೆಸ್ ವಿಧಿಸುವುದನ್ನು ಕೈಬಿಡಬೇಕು, ಅಂತರರಾಜ್ಯ ಸಮನ್ವಯ ಸಮಿತಿ ರಚನೆ ಮಾಡಬೇಕು, ಅನಿಯಮಿತ ಸೀಮೆಎಣ್ಣೆ ಸರಬರಾಜು ಮಾಡಬೇಕು, ಮಲ್ಪೆಯಲ್ಲಿ ಹೊರ ಬಂದರು ನಿರ್ಮಾಣ ಮಾಡಬೇಕು, ಈಗಿರುವ ಬಂದರನ್ನು ಮೇಲ್ದರ್ಜೆಗೇರಿಸಬೇಕು, ಮೀನುಗಾರಿಕಾ ಕ್ಷೇತ್ರಕ್ಕೆ ಪೂರಕವಾಗಿ ಕೈಗಾರಿಕಾ ವಲಯ ಆರಂಭಿಸಬೇಕು, ಹಳೆಯ ಬೋಟುಗಳ ಪುನರ್ ನಿರ್ಮಾಣಕ್ಕೆ ಸಹಾಯಧನ ನೀಡಬೇಕು ಎಂಬ ಬೇಡಿಕೆಗಳ ಮನವಿಯನ್ನು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಕೇಂದ್ರ ಸಚಿವರಿಗೆ ಸಲ್ಲಿಸಿದರು.

ಹಿರಿಯ ಮೀನುಗಾರರಿಗೆ ಪಿಂಚಣಿ ನೀಡಬೇಕು, ನಾಡ ದೋಣಿ ಮೀನುಗಾರರಿಗೆ ಪರ್ಯಯ ಇಂಧನ ಒದಗಿಸುಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷ ಜಯ ಸಿ.ಸುವರ್ಣ ಮನವಿ ಸಲ್ಲಿಸಿದರು.

ADVERTISEMENT

ಮೀನುಗಾರರ ಮನವಿಗಳ ಬಗ್ಗೆ ಪರಿಶೀಲಿಸಿ ಗರಿಷ್ಠ ಪ್ರಯೋಜನ ಒದಗಿಸಲಾಗುವುದು. ಪ್ರಸ್ತುತ ಇರುವ ಯೋಜನೆಗಳಲ್ಲಿ ಅಗತ್ಯ ಬದಲಾವಣೆ ಮಾಡುವ ಮುಲಕ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಮೀನುಗಾರ ಮುಖಂಡರಿಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.