ADVERTISEMENT

ಹೆಬ್ರಿ: ಆಸ್ಪತ್ರೆ ಮೇಲ್ದರ್ಜೆಗೇರಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 14 ಮೇ 2025, 14:13 IST
Last Updated 14 ಮೇ 2025, 14:13 IST
ಹೆಚ್.ಕೆ.ಶ್ರೀಧರ ಶೆಟ್ಟಿ
ಹೆಚ್.ಕೆ.ಶ್ರೀಧರ ಶೆಟ್ಟಿ   

ಹೆಬ್ರಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಸಾಮಾಜಿಕ ಹೋರಾಟಗಾರ ಎಚ್.ಕೆ.ಶ್ರೀಧರ ಶೆಟ್ಟಿ ಮನವಿ ಮಾಡಿದ್ದಾರೆ.

ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ದಿನನಿತ್ಯವೂ ಹಲವು ರೋಗಿಗಳು ಭೇಟಿ ನೀಡುತ್ತಿದ್ದು, ಹೆಚ್ಚಿನ ಸವಲತ್ತು ಇಲ್ಲದೆ ಜನರಿಗೆ ಸಮಸ್ಯೆಯಾಗುತ್ತಿದೆ. ಹೆಬ್ರಿ ತಾಲ್ಲೂಕಾಗಿ ಹಲವು ವರ್ಷಗಳೇ ಕಳೆದಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದರೆ ಹೆಚ್ಚಿನ ಸವಲತ್ತು ದೊರೆಯಲಿದೆ. ಆದ್ದರಿಂದ ಆಸ್ಪತ್ರೆಯನ್ನು ಶೀಘ್ರ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವರು ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT