ಕಾಪು (ಪಡುಬಿದ್ರಿ): ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ತೆರವಾದ ಸ್ಥಾನಕ್ಕೆ ಮೊಗವೀರ ಸಮುದಾಯದವರನ್ನೇ ನೇಮಕ ಮಾಡುವುದು ನ್ಯಾಯ ಸಮ್ಮತ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಹೆಚ್ಚು ಸಂಖ್ಯೆಯಲ್ಲಿ ಮೊಗವೀರ ಸಮುದಾಯದವರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿ ವ್ಯವಸ್ಥಾಪನಾ ಸಮಿತಿಯಲ್ಲಿದ್ದ ಸಮುದಾಯದ ಶ್ರೀಧರ್ ಕಾಂಚನ್ ಅವ ಈಚೆಗೆ ನಿಧನರಾಗಿದ್ದಾರೆ. ತೆರವಾದ ಸ್ಥಾನಕ್ಕೆ ಕೆಲವೊಂದು ಕಾಣದ ಕೈಗಳು ಒಣಪ್ರತಿಷ್ಠೆಗಾಗಿ ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಂಡು, ಸಾರ್ವಜನಿಕರಿಗೆ ಮಾಹಿತಿ ಅಥವಾ ಸದಸ್ಯತ್ವ ಭರ್ತಿ ಮಾಡುವ ಬಗ್ಗೆ ಸಾರ್ವಜನಿಕರ ಅವಗಾಹನೆಗೆ ತರದೆ ತರಾತುರಿಯಲ್ಲಿ ಮೊಗವೀರ ಸಮುದಾಯವನ್ನು ಕಡೆಗಣಿಸಿ ಬೇರೊಬ್ಬರನ್ನು ನೇಮಕ ಮಾಡಿರುವುದು ನ್ಯಾಯವಲ್ಲ ಎಂದು ಅವರು ಹೇಳಿದ್ದಾರೆ.
ಮೊಗವೀರ ಸಮುದಾಯದ ವ್ಯಕ್ತಿಯನ್ನು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸುತ್ತದೆ ಮತ್ತು ಬೆಂಬಲ ನೀಡುತ್ತದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.