ADVERTISEMENT

ಕರಾವಳಿ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿ ಕೇಂದ್ರ: ಕೋಟ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 13:08 IST
Last Updated 7 ಜೂನ್ 2022, 13:08 IST
ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ   

ಉಡುಪಿ: ಸೇನೆ ಸೇರಲು ಆಸಕ್ತಿ ಇರುವ ಯುವಕರಿಗೆ ತರಬೇತಿ ನೀಡಲು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿ, ಉಡುಪಿಯಲ್ಲಿ ಕೋಟಿ ಚೆನ್ನಯ್ಯ, ಉತ್ತರ ಕನ್ನಡದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಂಜಾ ನಾಯ್ಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೇನಾ ಪೂರ್ವ ತರಬೇತಿ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ.

ಕೇಂದ್ರದಲ್ಲಿ 50 ಮಂದಿಗೆ ವಸತಿ ಸಹಿತ ತರಬೇತಿ ನೀಡಲಾಗುವುದು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಅವಕಾಶ ಇದೆ. ಸ್ಥಳ ಅಂತಿಮಗೊಳಿಸಿ ಶೀಘ್ರವೇ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಕೋಟ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.