ಉಡುಪಿ: ಸಂಸ್ಕೃತ ಮತ್ತು ಕನ್ನಡ ಸಾಹಿತ್ಯ ಪರಂಪರೆಯ ಕಲೆಯಾದ ಅಷ್ಟಾವಧಾನವನ್ನು ಭಾನುವಾರ ಕೃಷ್ಣಮಠದ ರಾಜಾಂಗಣದಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಮಹಾಮಹೋಪಾಧ್ಯಾಯ ಶತಾವಧಾನಿ ರಾಮನಾಥ ಆಚಾರ್ಯ ನಡೆಸಿಕೊಟ್ಟರು. ಸುಮಾರು 2 ಗಂಟೆಗಳ ಕಾಲಾವಧಿಯಲ್ಲಿ 8 ವಿಭಾಗಗಳ ಎಲ್ಲಾ ಪ್ರಕಾರಗಳನ್ನು ನಿರ್ವಹಿಸಿ ಅತ್ಯಲ್ಪ ಕಾಲದಲ್ಲಿ ಕಠಿಣವಾದ ಸವಾಲುಗಳನ್ನು ನೆರವೇರಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಪ್ರಶ್ನಪ್ರಹಸನ, ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು ಗೀತಾಲೋಕನ ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಚಿತ್ರಕವನ ವಿಭಾಗದ ಪೃಚ್ಛಕರಾಗಿದ್ದರು.
ವಿರುದ್ಧವರ್ಣ ವಿಭಾಗದಲ್ಲಿ ಮಧುಸೂದನ ಭಟ್, ಪದಪ್ರಧಾನ ವಿಭಾಗದಲ್ಲಿ ವಿದ್ವಾನ್ ಮುರಾರಿ ತಂತ್ರಿ ಬೈಲೂರು, ಸಮಸ್ಯಾವಸಾನ ವಿಭಾಗದಲ್ಲಿ ವಿದ್ವಾನ್ ಕೃಷ್ಣ ನೂರಿತ್ತಾಯ ಧರ್ಮಸ್ಥಳ, ವೇದಪೂರಣ ವಿಭಾಗದಲ್ಲಿ ಅಡ್ವೆ ಲಕ್ಷ್ಮೀಶ ಭಟ್ ಭಾಗವಹಿಸಿದ್ದರು.
ಡಾ. ಷಣ್ಮುಖ ಹೆಬ್ಬಾರ್ ನಿರ್ವಹಿಸಿದರು. ಮಹಿತೋಷ ಆಚಾರ್ಯ ವಂದಿಸಿದರು. ಪ್ರಮೋದಾಚಾರ್ಯ ಮತ್ತು ರಮೇಶ ಭಟ್ ಸಹಕರಿಸಿದರು. ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ವಿದ್ವಾನ್ ಪ್ರಸನ್ನಾಚಾರ್ಯ ಸಹಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.