ADVERTISEMENT

ಮೋದಿಯನ್ನು ಮುಟ್ಟಲಾಗುವುದಿಲ್ಲ: ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 13:53 IST
Last Updated 29 ಜೂನ್ 2022, 13:53 IST
ಡಾ.ಸಿ.ಎನ್‌. ಅಶ್ವತ್ಥ ನಾರಾಯಣ
ಡಾ.ಸಿ.ಎನ್‌. ಅಶ್ವತ್ಥ ನಾರಾಯಣ   

ಕುಂದಾಪುರ: ಅಧಿಕಾರಾವಧಿಯಲ್ಲಿ ನೂರಾರು ಸವಾಲು ಹಾಗೂ ಬೆದರಿಕೆಗಳನ್ನು ಎದುರಿಸಿರುವ ಪ್ರಧಾನಿ‌ ಮೋದಿ ಅವರು ಕೊಲೆ ಬೆದರಿಕೆಗೆ ಹೆದರುವುದಿಲ್ಲ. ಮೋದಿ ಅವರನ್ನು ಮುಟ್ಟಲೂ ಸಾದ್ಯವಿಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಆಕ್ರೋಶ ವ್ಯಕ್ತಪಡಿಸಿದರು.

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಯಾವ ಧರ್ಮವೂ ಕಾನೂನು ಕೈಗೆತ್ತಿಕೊಳ್ಳಲು ಹೇಳುವುದಿಲ್ಲ. ಅಧರ್ಮಿಗಳು, ಮೂಢರು ಮಾತ್ರ ಕೊಲೆಯಂತಹ ಕೃತ್ಯಗಳನ್ನು ಎಸಗುತ್ತಾರೆ.

ಉದಯಪುರದಲ್ಲಿ ನಡೆದ ಕನ್ನಯ್ಯಲಾಲ್‌ ಹತ್ಯೆಯಂತಹ ಕೌರ್ಯ ಮತ್ತೆ ಮರುಕಳಿಸಬಾರದು. ಅಮಾಯಕನ ಶಿರಚ್ಛೇದ ಮಾಡುವ ಮೂಲಕ ಕೊಲೆಗಡುಕರು ವಿಕೃತ ಮನಸ್ಥಿತಿ ಪ್ರದರ್ಶಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದುಅಶ್ವತ್ಥ ನಾರಾಯಣ ಒತ್ತಾಯಿಸಿದರು.

ADVERTISEMENT

ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಪ್ರಾಸ್ತಾವವಿದ್ದು ಉಡುಪಿಗೆ ಮೆಡಿಕಲ್‌ ಕಾಲೇಜು ಮಂಜೂರಾತಿ ಕುರಿತು ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಬಸ್‌ ಸಮಸ್ಯೆ ಇದ್ದರೆ ಶೀಘ್ರ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಕೋವಿಡ್ ಕಾರಣದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ವಿತರಣೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯದ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತಿದ್ದು, ಶೀಘ್ರ ವಿದ್ಯಾರ್ಥಿಗಳಿಗೆ ಟ್ಯಾಬ್‌ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಪದವಿ ಕಾಲೇಜುಗಳಲ್ಲಿ ಕ್ರೀಡಾ ನಿರ್ದೇಶಕರ ಹಾಗೂ ಗ್ರಂಥಪಾಲಕರ ನೇಮಕಾತಿಯ ಬೇಡಿಕೆ ಇದ್ದು ಸರ್ಕಾರ ಗಮನ ಹರಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.