ಕಾಪು (ಪಡುಬಿದ್ರಿ): ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಅವರು ಗುರುವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯರ ದರ್ಶನ ಪಡೆದರು.
ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉಪಾಧ್ಯಕ್ಷ ಮಾಧವ ಆರ್. ಪಾಲನ್, ವ್ಯವಸ್ಥಾಪನ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್ ಇದ್ದರು.
ಪುಟ್ಟರಾಜು ಭೇಟಿ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಪತ್ನಿಯೊಂದಿಗೆ ಬಂದು ಗುರುವಾರ ಕಾಪು ಅಮ್ಮನ ದರ್ಶನ ಪಡೆದು, ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.