ಕಾಪು (ಪಡುಬಿದ್ರಿ): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಬುಧವಾರ ಆಯೋಜಿಸಿದ್ದ ‘ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ’ದಲ್ಲಿ ಅವರು ಮಾತನಾಡಿದರು.
ಬಿಜೆಪಿ ಕಾಪು ಮಂಡಲದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಮುಖಂಡ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಸದಾನಂದ ಪ್ರಭು, ಗಿರೀಶ್ ಅಂಚನ್ ಮತ್ತು ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.