ADVERTISEMENT

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಜಿ.ಭಾಸ್ಕರ್ ಮಯ್ಯ ನಿಧನ

​ಪ್ರಜಾವಾಣಿ ವಾರ್ತೆ
Published 6 ಮೇ 2021, 5:35 IST
Last Updated 6 ಮೇ 2021, 5:35 IST
ಡಾ.ಜಿ.ಭಾಸ್ಕರ್ ಮಯ್ಯ
ಡಾ.ಜಿ.ಭಾಸ್ಕರ್ ಮಯ್ಯ   

ಉಡುಪಿ: ವೈಚಾರಿಕ ಸಾಹಿತ್ಯದ ಮೇರುಕೊಂಡಿಯಾಗಿದ್ದ ಡಾ.ಜಿ.ಭಾಸ್ಕರ್ ಮಯ್ಯ(70) ಗುರುವಾರ ಬೆಳಗಿನ ಜಾವ ನಿಧನರಾದರು.

ಕೋವಿಡ್‌ ತಗುಲಿದ್ದ ಅವರಿಗೆ ನಾಲ್ಕು ದಿನಗಳಿಂದ ಸಾಲಿಗ್ರಾಮದ ಪ್ರಣವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೃದಯಾಘಾತದಿಂದ ಭಾಸ್ಕರ್ ಮಯ್ಯ ಮೃತಪಟ್ಟಿದ್ದಾರೆ‌ ಎಂದು ಮೂಲಗಳು ತಿಳಿಸಿವೆ.

ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರಿಗೆ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕುಂದಾಪುರದ ಭಂಡಾರ್‌ಕರ್ಸ್ ಕಾಲೇಜಿನಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ದೀರ್ಘಕಾಲ ಕಾರ್ಯ ನಿರ್ವಹಿಸಿದ್ದರು. 50ಕ್ಕೂ ಹೆಚ್ಚು ಕೃತಿಗಳನ್ನು ಅವರು ರಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.