ಬ್ರಹ್ಮಾವರ: ಉಡುಪಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸರ್ಕಾರಿ ನ್ಯಾಷನಲ್ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗ, ಸಮಾಜ ಕಲ್ಯಾಣ ಇಲಾಖೆ ಮತ್ತು ನೀಲಾವರ ಗ್ರಾ.ಪಂ. ಆಶ್ರಯದಲ್ಲಿ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ಯೋಜನೆಗಳ ಮಾಹಿತಿ ಅರಿವು’ ಕಾರ್ಯಕ್ರಮ ನೀಲಾವರ ಗ್ರಾ.ಪಂ. ಸಭಾಂಗಣದಲ್ಲಿ ಗುರುವಾರ ನಡೆಯಿತು.
ಉಡುಪಿಯ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕಿ ವಿಜಯಲಕ್ಷ್ಮಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರುವ ಸರ್ಕಾರಿ ಯೋಜನೆ ಮತ್ತು ಸೌಲಭ್ಯಗಳ ಮಾಹಿತಿ ನೀಡಿದರು.
ನೀಲಾವರ ಗ್ರಾ.ಪಂ. ಅಧ್ಯಕ್ಷೆ ಬೇಬಿ ಕೆ. ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾ ಬಾಳಿಗಾ, ಉಪಾಧ್ಯಕ್ಷ ರಮೇಶ ಪೂಜಾರಿ, ಸದಸ್ಯೆ ಪ್ರಿಯಾ, ತೆಂಕನಿಡಿಯೂರು ಕಾಲೇಜು ಉಪನ್ಯಾಸಕರಾದ ಪ್ರಮೀಳಾ ಜೆ. ವಾಸ್, ರವಿ ಹಾಗೂ ಅಮಿತಾ ಇದ್ದರು.
ಉಡುಪಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಗಿರೀಶ, ಅಕ್ಷಯ, ಅಂಕಿತಾ, ದಾಕ್ಷಾಯಿಣಿ, ಗೌತಮಿ ಹಾಗೂ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸರ್ಕಾರಿ ನ್ಯಾಷನಲ್ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ, ಸುಶಿಲ್ ಕಾರ್ಯಕ್ರಮ ಸಂಯೋಜಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.