ADVERTISEMENT

ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ವಿಶೇಷ ಮಂಡಲೋತ್ಸವ

​ಪ್ರಜಾವಾಣಿ ವಾರ್ತೆ
Published 29 ಜನವರಿ 2024, 16:11 IST
Last Updated 29 ಜನವರಿ 2024, 16:11 IST
ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.
ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.   

ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.

ಪೇಜಾವರ ಶ್ರೀಗಳು ಮಂಡಲೋತ್ಸವದ ಪ್ರಯುಕ್ತ ನಿತ್ಯ ನಧಾರ್ಮಿಕ ವಿಧಿವಿಧಾನಗಳನ್ನು ನಡೆಸುತ್ತಿದ್ದು ಯೋಗಿ ಆದಿತ್ಯ ನಾಥ್ ಅವರಿಗೆ ಹೋಮ–ಹವನ ಕಲಶಾರಾಧನೆ, ಕಲಶಾಭಿಷೇಕದ ರಜತ ಕುಂಭ ಪ್ರಸಾದ ನೀಡಿ ಶುಭ ಹಾರೈಸಿದರು.

ಈ ಸಂದರ್ಭ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ಮುಖಂಡ ಗೋಪಾಲ್ ಜೀ, ಅರ್ಚಕರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.