ADVERTISEMENT

ಕಾರ್ಕಳ | ₹6 ಕೋಟಿ ವೆಚ್ಚದ 9 ಆಯುಷ್ಮಾನ್ ಭಾರತ್ ಕಟ್ಟಡ ಮಂಜೂರು: ಕೋಟ ಪೂಜಾರಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 2:32 IST
Last Updated 16 ಫೆಬ್ರುವರಿ 2026, 2:32 IST
ಕಾರ್ಕಳ ತಾಲ್ಲೂಕಿನ ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ನೂತನ ಆಯುಷ್ಮಾನ್ ಕಟ್ಟಡಕ್ಕೆ ಶಿಲಾನ್ಯಾಸ ಮಾಡಲಾಯಿತು.
ಕಾರ್ಕಳ ತಾಲ್ಲೂಕಿನ ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ನೂತನ ಆಯುಷ್ಮಾನ್ ಕಟ್ಟಡಕ್ಕೆ ಶಿಲಾನ್ಯಾಸ ಮಾಡಲಾಯಿತು.   

ಕಾರ್ಕಳ: ಇಲ್ಲಿನ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಹಣಕಾಸು ನೆರವಿನ ಮೂಲಕ ₹6 ಕೋಟಿ ವೆಚ್ಚದಲ್ಲಿ 9 ಆಯುಷ್ಮಾನ್ ಭಾರತ್ ಕಟ್ಟಡ ಮಂಜೂರಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ತಾಲ್ಲೂಕಿನ ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಆಯುಷ್ಮಾನ್ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಬೇಕಾದ ಹೊಣೆ ಜನಪ್ರತಿನಿಧಿಗಳಾದ ನಮ್ಮೆಲ್ಲರದ್ದು ಎಂದರು.

70 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರದ ನೆರವಿನ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಸರ್ಕಾರ ಇನ್ನೂ ಪ್ರಾರಂಭಿಸಿಲ್ಲ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಒಂದು ಕುಟುಂಬಕ್ಕೆ ₹5 ಲಕ್ಷದ ಆರ್ಥಿಕ ಆರೋಗ್ಯ ನೆರವಿನ ಯೋಜನೆ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ ಎಂಬ ಕಾರಣಕ್ಕೆ ರೋಗಿಯನ್ನು ವಾಪಸ್ ಕಳುಹಿಸುತ್ತಿವೆ. ಕೇಂದ್ರದ ಶಸ್ತ್ರಚಿಕಿತ್ಸಾ ದರ ರಾಜ್ಯ ಸರ್ಕಾರ ನೀಡುತ್ತಿಲ್ಲ ಎಂದು ಖಾಸಗಿ ಆಸ್ಪತ್ರೆ ವಲಯ ದೂರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಆಯುಷ್ಮಾನ್ ಭಾರತ್‌ನಂತಹ ಬಡವರ ಪರ ಯೋಜನೆಗಳು ಅನುಷ್ಠಾನ ಮಾಡಲು ಅಗ್ರಹಿಸಿದ್ದೇನೆ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಕಾರ್ಕಳ ಕ್ಷೇತ್ರಕ್ಕೆ ಮಂಜೂರಾಗಿರುವ ಆರೋಗ್ಯ ಘಟಕಗಳನ್ನು‌ ಕ್ಲಪ್ತ ಸಮಯದಲ್ಲಿ‌ ಮುಗಿಸಲು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ‌ ಪಂಚಾಯಿತಿ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.