
ಬೈಂದೂರು: ಗ್ಯಾರೇಜ್ ಮಾಲೀಕರು ಕೆಲಸಗಾರರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ದೊರಕಿಸಿಕೊಡಬೇಕು ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು.
ಯಡ್ತರೆ ಜೆ.ಎನ್.ಆರ್ ಕಲಾಮಂದಿರದಲ್ಲಿ ನಡೆದ ಬೈಂದೂರು ತಾಲ್ಲೂಕು ಗ್ಯಾರೇಜ್ ಮಾಲೀಕರ ಸಂಘದ ಷೋಡಶ ಮಹೋತ್ಸವ, 16ನೇ ವಾರ್ಷಿಕ ಮಹಾಸಭೆ, ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ಗುರುರಾಜ ಗಂಟಿಹೊಳೆ ದೂರವಾಣಿ ಮೂಲಕ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಗ್ಯಾರೇಜ್ ಮಾಲೀಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಮಣಿಪಾಲ, ಕುಂದಾಪುರ ತಾಲ್ಲೂಕು ಸಂಘದ ಅಧ್ಯಕ್ಷ, ನಾರಾಯಣ ಆಚಾರ್, ಕ್ಲೀನ್ ಕಿನಾರಾ ತಂಡದ ಸಂಯೋಜಕ ರಾಘವೇಂದ್ರ ಸುರಭಿ, ಬೈಂದೂರು ತಾಲ್ಲೂಕು ಸಂಘದ ಕಾರ್ಯದರ್ಶಿ ಎಸ್. ಸಂಜೀವ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಕಾರ್ಮಿಕ ಕಾರ್ಡ್ ನೋಂದಣಿ ಮಾಡಲಾಯಿತು. ಗ್ಯಾರೇಜ್ ಮಾಲೀಕರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಬೈಂದೂರು ತಾಲ್ಲೂಕು ಸಂಘದ ಅಧ್ಯಕ್ಷ ಕೃಷ್ಣಯ್ಯ ವಿ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು. ರಿಕ್ಷಾ, ಟೆಂಪೋ, ಟ್ಯಾಕ್ಸಿ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಸುರೇಶ ಬಟವಾಡಿ, ಉಡುಪಿ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ಕುಂದಾಪುರ ಕಾರ್ಮಿಕ ನಿರೀಕ್ಷಕ ವಿಜೇಂದ್ರ, ಬೈಂದೂರು ಪೊಲೀಸ್ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್., ಉಡುಪಿ ಸಂಘದ ಅಧ್ಯಕ್ಷ ರೋಷನ್ ಕರ್ಕಡ, ಬ್ರಹ್ಮಾವರ ತಾಲ್ಲೂಕು ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಬೈಂದೂರು ತಾಲ್ಲೂಕು ಸಂಘದ ಉಪಾಧ್ಯಕ್ಷ ಸದಾನಂದ ಆಚಾರ್ಯ, ಜೆ.ಎನ್.ಆರ್. ಕಲಾಮಂದಿರದ ವ್ಯವಸ್ಥಾಪಕ ವೆಂಕಟರಮಣ ಬಿಜೂರು. ಇದ್ದರು.
ಸುರೇಶ್ ಜೋಗೂರು ಪ್ರಾರ್ಥಿಸಿದರು. ಜೊತೆ ಕಾರ್ಯದರ್ಶಿ ನಾಗರಾಜ್ ಆಚಾರ್ ಸ್ವಾಗತಿಸಿದರು. ರಾಘವೇಂದ್ರ ಸುರಭಿ ವರದಿ ವಾಚಿಸಿದರು. ಅಣ್ಣಪ್ಪಯ್ಯ ಆಚಾರ್ಯ ವಂದಿಸಿದರು. ಶಿಕ್ಷಕ ಆನಂದ ಮದ್ದೋಡಿ ಹಾಗೂ ರಾಮಕೃಷ್ಣ ದೇವಾಡಿಗ ನಿರೂಪಿಸಿದರು.