ADVERTISEMENT

ಬೈಂದೂರು: ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 4:27 IST
Last Updated 22 ಡಿಸೆಂಬರ್ 2025, 4:27 IST
ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯನ್ನು ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿದರು 
ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯನ್ನು ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿದರು    

ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ಹಾಗೂ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ 2025 ಉದ್ಘಾಟನಾ ಸಮಾರಂಭ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಸಭಾಭವನದಲ್ಲಿ ಶನಿವಾರ ನಡೆಯಿತು.

ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ ಮ್ಯಾನೇಂಜಿಗ್ ಡೈರೈಕ್ಟರ್ ಗೋವಿಂದ ಬಾಬು ಪೂಜಾರಿ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಪ್ರತಿಭೆಗಳಿಗೆ ಅವಕಾಶಗಳು ಒದಗಿಸಿದಾಗ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ. ತಾನು ದತ್ತು ಸ್ವೀಕರಿಸಿದ ಬಿಜೂರು ಶಾಲೆಯ ಇನ್ನಷ್ಟು ಅಭಿವೃದ್ಧಿಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಹಿರಿಯರಾದ ವಿಶ್ವೇಶ್ವರ ಅಡಿಗ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಹ ನೀಡಿದಾಗ ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಬಿಜೂರು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ನಾಗರತ್ನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಬಿಜೂರು ಗ್ರಾ.ಪಂ. ಸದಸ್ಯ ರಾಜೇಂದ್ರ ಬಿಜೂರು, ಬೈಂದೂರು ತಾಲೂಕು ರಾಜ್ಯ ನೌಕರರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ನೌಕರ ಸಂಘದ ಸದಸ್ಯ ಕೇಶವ ನಾಯ್ಕ ಬಿಜೂರು, ಉದ್ಯಮಿ ಮಹಾಬಲೇಶ್ವರ, ನಿವ್ರತ ಮುಖ್ಯ ಶಿಕ್ಷಕ ಗಿರೀಶ್ ಶ್ಯಾನುಭಾಗ್, ಬಿಜೂರು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಂದೀಶ್ ದೇವಾಡಿಗ, ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ ಮ್ಯಾನೇಜರ್ ನಾಗರಾಜ್ ಪಿ. ಯಡ್ತರೆ, ತಾ. ದೈ. ಶಿ. ಪರಿವೀಕ್ಷಣಾಧಿಕಾರಿ ವಿಜಯ ಕುಮಾರ್ , ಮುಖ್ಯಶಿಕ್ಷಕ ವಿಶ್ವನಾಥ ಪೂಜಾರಿ, ಬಿಜೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಎಸ್., ಮುಖ್ಯಶಿಕ್ಷಕ ಜಯಾನಂದ ಪಟಗಾರ, ಸತ್ಯನಾ ಕೊಡೇರಿ, ಬಿಜೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಯಶೋಧಾ ಇದ್ದರು.

ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪಕುಮಾರ್ ಶೆಟ್ಟಿ ಸ್ವಾಗತಿಸಿದರು. ಬಿಜೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಎಸ್. ವಂದಿಸಿದರು. ಶಿಕ್ಷಕ ರವೀಂದ್ರ ದೇವಾಡಿಗ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.