ಉಡುಪಿ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ 2004ರಲ್ಲಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಗಳ ಪರ್ಯಾಯದ ವೇಳೆ ಕೃಷ್ಣಮಠಕ್ಕೆ ಭೇಟಿ ನೀಡಿದ್ದರು. ಅಂದು ರಾಜಾಂಗಣದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಎಸ್‌ಪಿಬಿ ಮನತುಂಬಿ ಹಾಡಿದ್ದರು.
2016ರ ಜೂನ್ 4ರಂದು ಜನ್ಮದಿನದಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅಂದು ಭಕ್ತಿಗೀತೆಗಳನ್ನು ಹಾಡಿ ದೇವರಿಗೆ ಸಂಗೀತ ಸೇವೆ ನೀಡಿದ್ದರು. ಬಳಿಕ ಮಧ್ಯಾಹ್ನ ಉಡುಪಿಗೆ ಬಂದು ಕೃಷ್ಣನ ದರ್ಶನ ಪಡೆದು ಚಂದ್ರಶಾಲೆಯಲ್ಲಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ, ‘ಬಾರೋ ಕೃಷ್ಣಯ್ಯ’, ‘ಕೃಷ್ಣ ನೀ ಬೇಗನೆ ಬಾರೋ’ ಹಾಡುಗಳನ್ನು ಹಾಡಿದ್ದರು.
ಪೇಜಾವರ ಶ್ರೀಗಳು ಬಾಲಸುಬ್ರಹ್ಮಣ್ಯಂ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದರು. ಆಗ ಪೇಜಾವರ ಶ್ರೀಗಳ 5ನೇ ಪರ್ಯಾಯ ನಡೆಯುತ್ತಿತ್ತು ಎಂದು ಮಠದ ಸಿಬ್ಬಂದಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.