ADVERTISEMENT

ಹೆಬ್ರಿ | ಬ್ಯಾಂಕ್‌ಗೆ ವಂಚನೆ: ದೂರು

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 14:39 IST
Last Updated 7 ಜೂನ್ 2025, 14:39 IST
<div class="paragraphs"><p>&nbsp;ವಂಚನೆ–ಪ್ರಾತಿನಿಧಿಕ ಚಿತ್ರ</p></div>

 ವಂಚನೆ–ಪ್ರಾತಿನಿಧಿಕ ಚಿತ್ರ

   

ಹೆಬ್ರಿ: ಇಲ್ಲಿನ ವ್ಯವಸಾಯ ಸೇವಾ ಸಹಕಾರ ಸಂಘದ ಸಿಬ್ಬಂದಿ ಶಂಕರ ಎಂಬುವರು ಬ್ಯಾಂಕ್‌ನ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೀನ ನಾಯ್ಕ ಅವರು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸುಂದರ ಕುಲಾಲ ಎಂಬುವರಿಗೆ ₹88,150 ಅನ್ನು ಕೂಲಿ ನೀಡಲಾಗಿದೆ ಎಂದು ಶಂಕರ ಅವರು ಸುಳ್ಳು ಮಾಹಿತಿ ನೀಡಿ ಆ ಮೊತ್ತವನ್ನು ದುರ್ಬಳಕೆ ಮಾಡಿದ್ದಾರೆ. ಈ ಮೂಲಕ ಅವರು ಕೆಲಸ ಮಾಡುವ ಹೆಬ್ರಿ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಮೋಸ, ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.