ADVERTISEMENT

ಬಂಟಕಲ್: ರಕ್ತದಾನ ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 14:11 IST
Last Updated 20 ಜೂನ್ 2025, 14:11 IST
ಸಂಸ್ಥೆಯ ಪ್ರಾಂಶುಪಾಲ ತಿರುಮಲೇಶ್ವರ ಭಟ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು
ಸಂಸ್ಥೆಯ ಪ್ರಾಂಶುಪಾಲ ತಿರುಮಲೇಶ್ವರ ಭಟ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು   

ಶಿರ್ವ: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ರೋರ‍್ಯಾಕ್ಟ್ ಕ್ಲಬ್, ರಕ್ತ ನಿಧಿ ಕೇಂದ್ರ, ಕಸ್ತೂರ್ ಬಾ ಆಸ್ಪತ್ರೆ ಮಣಿಪಾಲದ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾಕೃಷ್ಣ ಎಸ್ ಐತಾಳ್ ಶಿಬಿರ ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲ ತಿರುಮಲೇಶ್ವರ ಭಟ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

ಕೆಎಂಸಿ ಮಣಿಪಾಲದ ರಕ್ತ ವರ್ಗಾವಣೆ ವಿಭಾಗದ ಮುಖ್ಯಸ್ಥ ಡಾ. ಗಣೇಶ್ ಮೋಹನ್ ಮಾತನಾಡಿದರು. ಶಿಬಿರದಲ್ಲಿ 80ಕ್ಕೂ ಅಧಿಕ ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.