ADVERTISEMENT

ಬಾರ್ಕೂರು| ವ್ಯಕ್ತಿತ್ವ ರೂಪಿಸಲು ಯೋಜನೆ ಸಹಕಾರಿ: ಶ್ರೀನಿವಾಸ ಶೆಟ್ಟಿಗಾರ್‌

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 7:38 IST
Last Updated 26 ಜನವರಿ 2026, 7:38 IST
ಬಾರ್ಕೂರು ಕಚ್ಚೂರು ನಾಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶ್ರೀನಿವಾಸ ಶೆಟ್ಟಿಗಾರ್‌ ಉದ್ಘಾಟಿಸಿದರು 
ಬಾರ್ಕೂರು ಕಚ್ಚೂರು ನಾಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶ್ರೀನಿವಾಸ ಶೆಟ್ಟಿಗಾರ್‌ ಉದ್ಘಾಟಿಸಿದರು    

ಬಾರ್ಕೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಸಹಕಾರಿಯಾಗಿದೆ ಎಂದು ಬಾರ್ಕೂರು ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀನಿವಾಸ ಶೆಟ್ಟಿಗಾರ್‌ ಹೇಳಿದರು.

ಬಾರ್ಕೂರು ಕಚ್ಚೂರು ನಾಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ಬಾರ್ಕೂರು ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಬಾರ್ಕೂರು ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಮಹಿಳೆಯರಿಗೆ ಯೋಜನೆ ವೇದಿಕೆ ಕಲ್ಪಿಸಿಕೊಟ್ಟಿದೆ. ಗ್ರಾಮಾಭಿವೃದ್ಧಿ ಯೋಜನೆಯ ಜನಪರ ಯೋಜನೆಯಗಳು ದೇಶಕ್ಕೆ ಮಾದರಿಯಾಗಿವೆ ಎಂದು ಅವರು ಹೇಳಿದರು.

ADVERTISEMENT

ಬಾರ್ಕೂರು ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಗೌರಿ ವಿ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಬಾರ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಶಾಂತಾರಾಮ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಕೂಡ್ಲಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀನಿವಾಸ ಉಡುಪ ಮಾಸಾಶನ ಮಂಜೂರಾತಿ ಪತ್ರ ವಿತರಿಸಿದರು. ಕಚ್ಚೂರು ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ರಮೇಶ ಭಂಡಾರಿ ಸುಜ್ಞಾನ ನಿಧಿ ಮಂಜೂರಾತಿ ಪತ್ರ ವಿತರಿಸಿದರು. ಉದ್ಯಮಿ ಯಡ್ತಾಡಿ ಸಂಕಯ್ಯ ಶೆಟ್ಟಿ ಸದಸ್ಯರಿಗೆ ಕೈಪಿಡಿ ವಿತರಿಸಿದರು.

ಸಮಾರಂಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬ್ರಹ್ಮಾವರ ತಾಲ್ಲೂಕು ಯೋಜನಾಧಿಕಾರಿ ರಮೇಶ ಪಿ.ಕೆ, ಬ್ರಹ್ಮಾವರ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ಅಧ್ಯಕ್ಷ ಪ್ರಕಾಶ ಶೆಟ್ಟಿ, ಬ್ರಹ್ಮಾವರ ತಾಲ್ಲೂಕು ಭಜನಾ ಪರಿಷತ್‌ನ ಉಪಾಧ್ಯಕ್ಷ ರಾಘವೇಂದ್ರ ರಾವ್‌, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪುರುಷೋತ್ತಮ, ಚಂದ್ರ ಮರಕಾಲ ಹಾಜರಿದ್ದರು.

ಮಂಜುನಾಥ ಪೂಜಾರಿ ಸ್ವಾಗತಿಸಿದರು. ಉಮೇಶ ಪೂಜಾರಿ ಬ್ರಹ್ಮಾವರ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಎಸ್‌. ವರದಿ ಮಂಡಿಸಿದರು. ಸತೀಶ ವಂದಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರತಿಯೊಬ್ಬರಿಗೂ ಸ್ವಂತ ಕಾಲಿನಲ್ಲಿ ನಿಲ್ಲುವ ಶಕ್ತಿಯನ್ನು ನೀಡಿದೆ. ಗ್ರಾಮೀಣ ಭಾಗದ ಮಹಿಳೆಯರು ಈ ಯೋಜನೆಯಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುವಂತಾಗಲಿ.
ಬಿ.ಶಾಂತಾರಾಮ ಶೆಟ್ಟಿ ಬಾರ್ಕೂರು ಗ್ರಾ.ಪಂಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.