ADVERTISEMENT

ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ

ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಸಭೆಯಲ್ಲಿ ಮೌನೀಶ್‌ ಮುದ್ಗಿಲ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 19:46 IST
Last Updated 3 ಡಿಸೆಂಬರ್ 2019, 19:46 IST
ಮಂಗಳವಾರ ನಡೆದ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಮೌನೀಶ್‌ ಮುದ್ಗಿಲ್‌ ಮಾತನಾಡಿದರು.
ಮಂಗಳವಾರ ನಡೆದ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಮೌನೀಶ್‌ ಮುದ್ಗಿಲ್‌ ಮಾತನಾಡಿದರು.   

ಉಡುಪಿ: ಜಿಲ್ಲೆಯ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಮತದಾರರ ಪಟ್ಟಿಯ ಪರಿಶೀಲನೆ, ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯ ಮಾಡಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಮೌನೀಶ್‌ ಮುದ್ಗಿಲ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ವ್ಯಕ್ತಿಗಳ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗುವ ಪ್ರಕರಣಗಳು ಕಂಡು ಬರುತ್ತಿವೆ. ಹಾಗಾಗಿ ಜಿಲ್ಲೆಯ ಗಣ್ಯ ವ್ಯಕ್ತಿಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರು ಸೇರಿದಂತೆ ಯಾವುದೇ ರಾಜಕೀಯ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಲ್ಲದೆ, ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಶೇ. 100 ಗುರಿ ಸಾಧನೆ ಮಾಡಬೇಕು ಎಂದು ತಿಳಿಸಿದರು.

ADVERTISEMENT

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.