ADVERTISEMENT

ಕೆಪಿಎಸ್ ಶಾಲೆಗೆ ಬಿಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 5:58 IST
Last Updated 13 ಸೆಪ್ಟೆಂಬರ್ 2022, 5:58 IST
ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ಪಡುಬಿದ್ರಿ: ಮೂಲಸೌಕರ್ಯ ಕೊರತೆ ಎದುರಿಸುತ್ತಿರುವ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಡುಬಿದ್ರಿಯ ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಮೂಲಸೌಕರ್ಯಗಳಿಲ್ಲದೆ ನೆಲದಲ್ಲಿ ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಇದೆ. ಅಲ್ಲದೆ ಈ ಶಾಲೆಯ ಕಟ್ಟಡ ತೀರ ಹಳೆಯದಾಗಿದೆ. ಕೂಡಲೇ ಹೊಸ ಕಟ್ಟಡ ನಿರ್ಮಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪಡುಬಿದ್ರಿ ನೀಡಿದ ದೂರಿನ ಹಿನ್ನಲೆಯಲ್ಲಿ ಅವರು ಭೇಟಿ ನೀಡಿ, ಶಾಲೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರ, ಗ್ರಾಮ ಪಂಚಾಯಿತಿ ಸದಸ್ಯ ಹೇಮಚಂದ್ರ ಹಾಗೂ ಪೋಷಕರು, ಮೂಲಸೌಕರ್ಯಗಳ ಕೊರತೆಯಿಂದ ಎಲ್‌ಕೆಜಿ ಹಾಗೂ ಯುಕೆಜಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಯಾಗಿದೆ ಎಂದರು.

ADVERTISEMENT

ಶಾಲೆಯ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಇಲ್ಲಿನ ಅಭಿವೃದ್ಧಿ ಹಾಗೂ ಸಮಸ್ಯೆಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾ ಗುವುದು. ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಬಿಇಒ ಭರವಸೆ ನೀಡಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿಯ ಸಂಯೋಜಕ ಉಮಾ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಪಡುಬಿದ್ರಿ ಕ್ಲಸ್ಟರ್ ಸಂಪನ್ಲೂಲ ವ್ಯಕ್ತಿ ಕವಿತಾ, ಕೆಪಿಎಸ್ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಕೃಷ್ಣಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.