ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ನಿವಾಸಿ ವಿದುಷಿ ದೀಕ್ಷಾ ವಿ. ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ ಇದೇ 21 ರಿಂದ 30ರ ವರೆಗೆ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ದೀಕ್ಷಾ, ಕಲಾ ಗುರುಗಳಾದ ವಿದ್ವಾನ್ ಶ್ರೀಧರ ರಾವ್ ಅವರ ಮಾರ್ಗದರ್ಶನದಲ್ಲಿ ದಾಖಲೆ ಸಾಧಿಸಲು ಸಜ್ಜಾಗಿದ್ದೇನೆ ಎಂದರು.
ಮಾಜಿ ಶಾಸಕ ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಮಹೇಶ್ ಠಾಕೂರ್ ಅವರ ಮುಂದಾಳತ್ವದ ಮಣಿಪಾಲದ ರತ್ನ ಸಂಜೀವ ಕಲಾಮಂಡಲವು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತಿದೆ. ಕಾರ್ಯಕ್ರಮಕ್ಕೆ ‘ನವರಸ ದೀಕ್ಷಾ ವೈಭವಂ’ ಎಂದು ಹೆಸರಿಡಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮವು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ 21ರಂದು 2 ಗಂಟೆಯಿಂದ ಆರಂಭವಾಗಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿದ್ವಾನ್ ಶ್ರೀಧರ ರಾವ್, ಉಷಾ ಹೆಬ್ಬಾರ್, ಅಶ್ವಿನಿ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.