ADVERTISEMENT

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 12:40 IST
Last Updated 24 ಜೂನ್ 2020, 12:40 IST
ಉದ್ಯಮಿ ಭಾಸ್ಕರ್ ಶೆಟ್ಟಿ
ಉದ್ಯಮಿ ಭಾಸ್ಕರ್ ಶೆಟ್ಟಿ   

ಉಡುಪಿ: ಅನಿವಾಸಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆಯ ನಿರಂಜನ್ ಭಟ್‌ಗೆ ಜಿಲ್ಲಾ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಆರೋಪಿ ನಿರಂಜನ್ ಭಟ್‌, ಎರಡು ದಿನಗಳ ಹಿಂದಷ್ಟೆ ತೀರಿಹೋದ ತಂದೆ ಶ್ರೀನಿವಾಸ್‌ ಭಟ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ₹ 5 ಲಕ್ಷ ಬಾಂಡ್‌ ಆಧಾರವಾಗಿ ಪಡೆದು 15 ದಿನಗಳ ಜಾಮೀನು ಮಂಜೂರು ಮಾಡಿದೆ. ಮೃತ ಶ್ರೀನಿವಾಸ್‌ ಭಟ್‌ ಕೂಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಪತ್ನಿ ರಾಜೇಶ್ವರಿ, ಶ್ರೀನಿವಾಸ್ ಭಟ್‌, ರಾಘವೇಂದ್ರ ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪ್ರಕರಣದ ಹಿನ್ನೆಲೆ: ಜುಲೈ 28, 2016ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಅವರ ಶವವನ್ನು ಹೋಮಕುಂಡದಲ್ಲಿ ಸುಟ್ಟು, ಅವಶೇಷಗಳನ್ನು ನದಿಗೆ ಎಸೆಯಲಾಗಿತ್ತು. ಪ್ರಕರಣ ಸಂಬಂಧ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ನಂದಳಿಕೆಯ ನಿರಂಜನ್ ಭಟ್‌, ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರ ಎಂಬುವರನ್ನು ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.