
ಎ.ಚಂದ್ರಶೇಖರ್ ಉಡುಪ
ಬ್ರಹ್ಮಾವರ (ಉಡುಪಿ): ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಬುಧವಾರ ನಿಧನರಾದರು.
ಅವರು ಡಿವೈನ್ ಪಾರ್ಕ್ ಮೂಲಕ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದರು.
ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಆರೋಗ್ಯ ಮತ್ತು ಅಧ್ಯಾತ್ಮದ ಚಿಂತನೆಯಲ್ಲಿ ಅವರು ಪ್ರಾರಂಭಿಸಿದರು.
ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಎಸ್‌ಎಚ್‌ಆರ್‌ಎಫ್ (ಯೋಗಬನ) ಸ್ಥಾಪಿಸಿದ ಅವರು, ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.
ಅವರಿಗೆ ಪುತ್ರ ಡಾ. ವಿವೇಕ ಉಡುಪ, ಪತ್ನಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.