ADVERTISEMENT

ವಿಶ್ವ ಹಿರಿಯ ನಾಗರಿಕರ ದಿನಾಚರಣೆ 1ರಂದು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 15:31 IST
Last Updated 28 ಸೆಪ್ಟೆಂಬರ್ 2022, 15:31 IST

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.1ರಂದು ಬೆಳಿಗ್ಗೆ 10 ಗಂಟೆಗೆ ಕುಂಜಿಬೆಟ್ಟು ಎಂ.ಜಿ.ಎ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 9 ರಿಂದ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ತಪಾಸಣೆ, ದಂತ ತಪಾಸಣೆ, ಬಿ.ಪಿ ಹಾಗೂ ಶುಗರ್ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿತಿಳಿಸಿದ್ದಾರೆ.

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ADVERTISEMENT

ಉಡುಪಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ ಹಾಗೂ ದೂರವಾಣಿ 0820-2574881, 2573881 ಸಂಪರ್ಕಿಸಬಹುದು.

ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಹಾಗೂ ಟೆಕ್ನಾಲಜಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್.ಸಿ ಇನ್ ಹಾರ್ಟಿಕಲ್ಚರ್, ಅಗ್ರಿಕಲ್ಚರಲ್ ಎಂಜಿನಿಯರಿಂಗ್, ಡೈರಿ ಟೆಕ್ನಾಲಜಿ, ಪಾರೆಸ್ಟ್ರಿ, ವೆಟರ್ನರಿ ಅಂಡ್ ಅನಿಮಲ್ ಟೆಕ್ನಾಲಜಿ, ಫಿಷರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್, ಫುಡ್ ನ್ಯುಟ್ರಿಷನ್ ಅಂಡ್ ಡಯಟಿಕ್ಸ್, ಬಿ.ಫಾರ್ಮಾ, ಎಂ.ಫಾರ್ಮಾ, ಡಿ ಫಾರ್ಮಾಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಸಾಲ ಪಡೆಯಲು ನಿಗಮದ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಸಹಾಯವಾಣಿ ಸಂಖ್ಯೆ :8277799990, 0820-2574990, ಉಡುಪಿ– 0820-2574596, ಕಾರ್ಕಳ–08258-231101 ಹಾಗೂ ಕುಂದಾಪುರ– 08254-230370 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.