ADVERTISEMENT

ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 16:16 IST
Last Updated 7 ಅಕ್ಟೋಬರ್ 2022, 16:16 IST

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವು ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.15ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ 0820-2574978, 2574972 ಸಂಪರ್ಕಿಸಬಹುದು.

ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ADVERTISEMENT

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಅ. 19ರಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ 0820-2575650 ಸಂಪರ್ಕಿಸಬಹುದು.

ಉಡುಪಿ ತಾ.ಪಂ: ಸಾಮಾನ್ಯ ಸಭೆ

ಉಡುಪಿ: ಉಡುಪಿ ತಾಲ್ಲೂಕು ಪಂಚಾಯತ್‌ನ ಸಾಮಾನ್ಯ ಸಭೆಯು ಅ.13ರಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.