ADVERTISEMENT

ಮೋದಿ ಆಡಳಿತ ಸಹಿಸದ ವಿರೋಧ ಪಕ್ಷಗಳಿಂದ ನಿರಾಧಾರ ಆರೋಪ: ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 12:44 IST
Last Updated 19 ಜೂನ್ 2022, 12:44 IST
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂಟು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲದಿಂದ ಭಾನುವಾರ ಶಾಸ್ತ್ರೀ ವೃತ್ತದಲ್ಲಿ ಆಯೋಜಿಸಿದ್ದ ವಿಕಾಸ ತೀರ್ಥ ಬೈಕ್ ರ‍್ಯಾಲಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂಟು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲದಿಂದ ಭಾನುವಾರ ಶಾಸ್ತ್ರೀ ವೃತ್ತದಲ್ಲಿ ಆಯೋಜಿಸಿದ್ದ ವಿಕಾಸ ತೀರ್ಥ ಬೈಕ್ ರ‍್ಯಾಲಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.   

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಸಹಿಸದ ವಿರೋಧ ಪಕ್ಷಗಳು ಇಲ್ಲಸಲ್ಲದ ಆರೋಪ ಹೊರಿಸುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂಟು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲದಿಂದ ಭಾನುವಾರ ಶಾಸ್ತ್ರೀ ವೃತ್ತದಲ್ಲಿ ಆಯೋಜಿಸಿದ್ದ ವಿಕಾಸ ತೀರ್ಥ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ವಿಕಾಸ ತೀರ್ಥ ಯಾತ್ರೆಯಲ್ಲಿ ಸಾಮಾನ್ಯ ಜನರಿಗೆ ಆಡಳಿತದ ಮಾಹಿತಿಯನ್ನು ಕೊಡಲಾಗುತ್ತಿದ್ದು ಯಾತ್ರೆ ಪರಿಣಾಮಕಾರಿಯಾಗಿ ಮುನ್ನಡೆಯಲಿ. ನರೇಂದ್ರ ಮೋದಿ ಆಡಳಿತದ 8 ವರ್ಷಗಳಲ್ಲಿ ಅಭಿವೃದ್ದಿಗೆ ಹಾಗೂ ದೇಶ ರಕ್ಷಣೆಗೆ ತೆಗೆದುಕೊಂಡಿರುವ ಸುಧಾರಣಾ ಕ್ರಮಗಳು ಸಂತೃಪ್ತಿ ನೀಡಿವೆ ಎಂದರು.

ADVERTISEMENT

ವಿಕಾಸ ತೀರ್ಥ ಯಾತ್ರೆಯಲ್ಲಿ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸದ ವಿಚಾರ. ಪ್ರಧಾನಿ‌ ಮೋದಿಯವರ ಎಂಟು ವರ್ಷದ ಆಡಳಿತದಲ್ಲಿನ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ವಿಕಾಸ ಯಾತ್ರೆ ಯಶಸ್ವಿಯಾಗಲಿ ಎಂದು ಆರೈಸಿದರು.

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.