ADVERTISEMENT

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2022, 5:22 IST
Last Updated 8 ನವೆಂಬರ್ 2022, 5:22 IST
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಭೇಟಿ ನೀಡಿದರು.
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಭೇಟಿ ನೀಡಿದರು.   

ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೋಮವಾರ ಭೇಟಿ ನೀಡಿದರು.

ದೇವಾಲಯದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯ ಅವರು ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ದೇವಳದ ಜೀರ್ಣೋದ್ಧಾರದ ರೂವಾರಿ ಜಿ.ಶಂಕರ್ ಅವರು ದೇವಾಲಯದ ವತಿಯಿಂದ ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು.

ADVERTISEMENT

ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೊಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಧ್ಯಕ್ಷ ವಾಸುದೇವ ಸಾಲ್ಯಾನ್, ಅಭಿವೃದ್ದಿ ಸಮಿತಿಯ ಅಧ್ಯಕ್ಷ ಗುಂಡು ಬಿ. ಅಮೀನ್, ಕಾಪು ಶಾಸಕ ಲಾಲಾಜಿ ಮೆಂಡನ್, ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣ, ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಮಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.