ADVERTISEMENT

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ 10ರಂದು

​ಪ್ರಜಾವಾಣಿ ವಾರ್ತೆ
Published 6 ಮೇ 2022, 15:40 IST
Last Updated 6 ಮೇ 2022, 15:40 IST

ಉಡುಪಿ: ಕಿದಿಯೂರು ಹೋಟೆಲ್‌ನ ಮಾಧವ ಕೃಷ್ಣ ಸಭಾಂಗಣದಲ್ಲಿ ಮೇ 10ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ವಿವಿಧ ಭಾಗಗಳಲಿಂದ 77 ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಸಭೆಯ ಕೊನೆಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಾಯಕರಾದ ಲಕ್ಷ್ಮಣ ಸವದಿ, ಪ್ರತಾಪ್ ಸಿಂಹ, ಡಾ.ಅಶ್ವತ್ಥ್ ನಾರಾಯಣ್‌, ವಿಜಯೇಂದ್ರ, ಅರುಣ್ ಕುಮಾರ್, ತೇಜಸ್ವಿನಿ ಅನಂತ ಕುಮಾರ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

ADVERTISEMENT

ಮೊದಲ ಬಾರಿಗೆ ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದು, ಅಂದು ಸರ್ವೀಸ್ ಬಸ್ ನಿಲ್ದಾಣದ ಬಳಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಮೆರವಣಿಗೆ ನಡೆಯಲಿದೆ. ಮೇ 18ರಂದು ಉಡುಪಿಯ ಶಾರದಾ ಹೋಟೆಲ್‌ನಲ್ಲಿ 24 ಪ್ರಕೋಷ್ಠಗಳ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ, ನಯನಾ ಗಣೇಶ್‌, ದಿನಕರ ಬಾಬು, ಮಹೇಶ್ ಠಾಕೂರ್, ಶಿಲ್ಪ ಸುವರ್ಣಾ, ಶಿವಕುಮಾರ್ ಅಂಬಲಪಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.