ADVERTISEMENT

ಉಡುಪಿ: ಗದ್ದೆಗಿಳಿದು ನಾಟಿ ಮಾಡಿದ ಶಾಸಕ ರಘುಪತಿ ಭಟ್‌

2ನೇ ಹಂತದ ಹಡಿಲು ಭೂಮಿ ಕೃಷಿ ‘ಕಡೇ ನಟ್ಟಿ’ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 7:45 IST
Last Updated 31 ಜುಲೈ 2022, 7:45 IST
ಉಡುಪಿಯ ಕೇದಾರೋತ್ಥಾನ ಟ್ರಸ್ಟ್ ಹಾಗೂ ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ ‘ಕಡೇ ನಟ್ಟಿ’ ಕಾರ್ಯಕ್ರಮದಲ್ಲಿ ಶನಿವಾರ ಶಾಸಕ ರಘುಪತಿ ಭಟ್‌ ವಿದ್ಯಾರ್ಥಿಗಳೊಂದಿಗೆ ನಾಟಿ ಮಾಡಿದರು.
ಉಡುಪಿಯ ಕೇದಾರೋತ್ಥಾನ ಟ್ರಸ್ಟ್ ಹಾಗೂ ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ ‘ಕಡೇ ನಟ್ಟಿ’ ಕಾರ್ಯಕ್ರಮದಲ್ಲಿ ಶನಿವಾರ ಶಾಸಕ ರಘುಪತಿ ಭಟ್‌ ವಿದ್ಯಾರ್ಥಿಗಳೊಂದಿಗೆ ನಾಟಿ ಮಾಡಿದರು.   

ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಹಾಗೂ ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ ‘ಕಡೇ ನಟ್ಟಿ’ ಶನಿವಾರ ಕಡೆಕಾರ್ ಭುವನೆಂದ್ರ ಕಿದಿಯೂರ್ ನಿವಾಸದ ಬಳಿ ನಡೆಯಿತು.

ಸ್ಥಳೀಯ ಕೃಷಿಕರು, ಸಂಘಟನೆಗಳ ಸದಸ್ಯರು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಟಿ ಮಾಡಿ ಸಂಭ್ರಮಿಸಿದರು.

ಶಾಸಕ ಹಾಗೂಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರೂ ಆದ ಕೆ.ರಘುಪತಿ ಭಟ್ ಸ್ವತಃ ಕೆಸರು ಗದ್ದೆಗಳಿದು ನಾಟಿ ಮಾಡುವ ಮೂಲಕ ಗಮನ ಸೆಳೆದರು. ಶಾಸಕರ ಬೆಂಬಲಿಗರು, ಕಾರ್ಯಕರ್ತರು ಕೈಜೋಡಿಸಿದರು. ಕೃಷಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಶಾಸಕರು ಮಾಹಿತಿ ನೀಡಿದರು.

ADVERTISEMENT

ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಕೇದಾರೋತ್ಥಾನ ಟ್ರಸ್ಟ್ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ರಾಘವೇಂದ್ರ ಉಪ್ಪೂರು, ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಗೋವಾ ಕಮಿಟಿ ಸದಸ್ಯ ಶಿವಕುಮಾರ್, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ವಿಜ್ಞಾನಿ ಡಾ. ಶಂಕರ್ ಇದ್ದರು.

ಕಾರ್ಯಕ್ರಮದಲ್ಲಿ ಈಚೆಗೆ ಹಂತಕರಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.