
ಉಡುಪಿ: ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯು ದುರುಪಯೋಗವಾಗುವ ಸಾಧ್ಯತೆ ಇರುವುದರಿಂದ ಅದನ್ನು ಜಾರಿಗೆ ತರಬಾರದು’ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಾನೂನು ತಜ್ಞರೊಂದಿಗೆ ಯಾವುದೇ ಚರ್ಚೆ ನಡೆಸದೆ ಈ ಮಸೂದೆಯನ್ನು ಜಾರಿಗೆ ತರಲು ಹೊರಟಿರುವುದು ದುರುದ್ದೇಶದಿಂದ ಕೂಡಿರುವ ತೀರ್ಮಾನವಾಗಿದೆ’ ಎಂದರು.
‘ಕರ್ನಾಟಕವು ಹಿಟ್ಲರ್ ಸಾಮ್ರಾಜ್ಯದಂತಾಗಿದ್ದು, ಇದು ಕಿರುಕುಳ ನೀಡಲು ತಂದಿರುವ ಮಸೂದೆಯಾಗಿದೆ’ ಎಂದು ಹೇಳಿದರು.
‘ಮಸೂದೆಯು ದುರುಪಯೋಗವಾಗದು ಎನ್ನುವುದಕ್ಕೆ ಏನು ಗ್ಯಾರೆಂಟಿ ಇದೆ? ಮುಖ್ಯಮಂತ್ರಿಯನ್ನು ಟೀಕಿಸಿದರೂ ಇದರಡಿ ಪ್ರಕರಣ ದಾಖಲಾಗಬಹುದು’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.