ADVERTISEMENT

ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 6:02 IST
Last Updated 19 ನವೆಂಬರ್ 2025, 6:02 IST
ಕಾರ್ಕಳ ಸಾಲ್ಮರದ ಬಿಜೆಪಿ ಕಚೇರಿಗೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಯಡಿಯೂರಪ್ಪ ಭೇಟಿ ನೀಡಿ ಮಾತನಾಡಿದರು.
ಕಾರ್ಕಳ ಸಾಲ್ಮರದ ಬಿಜೆಪಿ ಕಚೇರಿಗೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಯಡಿಯೂರಪ್ಪ ಭೇಟಿ ನೀಡಿ ಮಾತನಾಡಿದರು.   

ಕಾರ್ಕಳ: ‘ಉಡುಪಿ ಹಾಗೂ ದಕ್ಷಿಣ ಕನ್ನಡ ಸಂಘಟನೆಗೆ ಮಾದರಿಯಾಗಿರುವ ಜಿಲ್ಲೆಗಳು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಇಲ್ಲಿನ ಸಾಲ್ಮರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿ, ಯಡಿಯೂರಪ್ಪ ಅವರು ಉಡುಪಿ, ದ.ಕ. ಜಿಲ್ಲೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ನಂತರ ಮೊದಲ ಬಾರಿಗೆ ಕಾರ್ಕಳಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಜನರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ‌ ಇದೆ ಎನ್ನುವುದಕ್ಕಿಂತ ಕಾಂಗ್ರೆಸ್‌ನ ಪೊಳ್ಳು ಭರವಸೆಗಳನ್ನು ನಂಬಿ ಮೋಸ ಹೋದೆವು ಎಂಬ ಭಾವನೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಕಂದಕ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ ಹೊರತು ಅಭಿವೃದ್ಧಿಯಲ್ಲ ಎಂದು ಟೀಕಿಸಿದರು.

ADVERTISEMENT

ಬಿಜೆಪಿಯಲ್ಲಿ ಒಮ್ಮತವಿದೆ. ಕಾರ್ಯಕರ್ತರ ವಿಶ್ವಾಸ ಪಡೆಯುವಲ್ಲಿ ನಾಯಕರು ಯಶಸ್ವಿಯಾದರೆ ಸಹಜವಾಗಿ ಮತದಾರರ ವಿಶ್ವಾಸ ಪಡೆಯಲು ಸಾಧ್ಯವಾಗುತ್ತದೆ. ನಾನು ಯಡಿಯೂರಪ್ಪ ಅವರ ಮಗ ಅನ್ನುವ ಅಹಂ‌ ನ್ನು ಇಟ್ಟುಕೊಂಡಿಲ್ಲ. ಕಾರ್ಯಕರ್ತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.

ಶಾಸಕ ವಿ. ಸುನಿಲ್‌ ಕುಮಾರ್‌ ಮಾತನಾಡಿ, ಉಡುಪಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಬಿ.ವೈ. ವಿಜಯೇಂದ್ರ ಅವರನ್ನು ಸನ್ಮಾನಿಸಲಾಯಿತು. ಪಕ್ಷದ ಮುಖಂಡ ಬೋಳ ಪ್ರಭಾಕರ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುತ್ಯಾರು, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಯಶ್‌ಪಾಲ್ ಸುವರ್ಣ, ಹರೀಶ್ ಪೂಂಜ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ‌ ಶೆಟ್ಟಿ ಭಾಗವಹಿಸಿದ್ದರು. ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಸ್ವಾಗತಿಸಿದರು. ರವೀಂದ್ರ ಕುಮಾರ್ ಕುಕ್ಕುಂದೂರು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.