ADVERTISEMENT

17ರಿಂದ ಸೇವೆ, ಸಮರ್ಪಣಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 15:16 IST
Last Updated 16 ಸೆಪ್ಟೆಂಬರ್ 2021, 15:16 IST
ಕುಯಿಲಾಡಿ ಸುರೇಶ್ ನಾಯಕ್
ಕುಯಿಲಾಡಿ ಸುರೇಶ್ ನಾಯಕ್   

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೆ. 17ರಿಂದ ಅ.7ರವರೆಗೆ 20 ದಿನ ದೇಶವ್ಯಾಪಿ ಸೇವೆ ಮತ್ತು ಸಮರ್ಪಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 9 ಪ್ರಮುಖ ವಿಭಾಗಗಳಲ್ಲಿ ಸೇವಾ ಚಟುವಟಿಕೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಗುರುವಾರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೆ.17ರಂದು ಕೋಟ ಮಾಂಗಲ್ಯ ಸಭಾಭವನದಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆಯೊಂದಿಗೆ ಅಭಿಯಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದಾಾರೆ. ಸಾಹಿತಿಗಳು, ಗಣ್ಯರು, ವಿದ್ವಾಂಸರು ಸೇರಿ ಕನಿಷ್ಠ 100 ಮಂದಿಯಿಂದ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿಗೆ ಪೋಸ್ಟ್‌ಕಾರ್ಡ್ ಅಭಿಯಾನ ನಡೆಸಲಾಗುತ್ತಿದೆ ಎಂದರು

ನಮೋ ಆ್ಯಪ್ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದ್ದು ನದಿ-ಕೆರೆಗಳ ಸ್ವಚ್ಛತೆ, ಪ್ಲಾಸ್ಟಿಕ್ ಮುಕ್ತ ಅಭಿಯಾನ, ಸೆಣಬಿನ ಚೀಲ ವಿತರಣೆ, ಗಿಡ ನೆಡುವುದು, ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಲಸಿಕಾ ಅಭಿಯಾನ, ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ, ಇ-ಸಂವಾದ, ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ಸೆ.25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಆಚರಣೆ, ಅ.2ರಂದು ಗಾಂಧಿ ಜಯಂತಿ ಆಚರಿಸಲಾಗುವುದು ಎಂದು ಕುಯಿಲಾಡಿ ಸುರೇಶ್ ನಾಯಕ್‌ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಮಾಧ್ಯಮ ಸಹ ವಕ್ತಾರ ಎ. ಶಿವಕುಮಾರ್, ಶ್ರೀನಿಧಿ ಹೆಗ್ಡೆ, ಪ್ರವೀಣ್ ಕುಮಾರ್ ಗುರ್ಮೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.