ADVERTISEMENT

ಕಾಪು: ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 14:19 IST
Last Updated 14 ಸೆಪ್ಟೆಂಬರ್ 2024, 14:19 IST
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಶನಿವಾರ ಆಯೋಜಿಸಲಾಯಿತು.
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಶನಿವಾರ ಆಯೋಜಿಸಲಾಯಿತು.   

ಕಾಪು (ಪಡುಬಿದ್ರಿ): ‘ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾಪು ಮಂಡಲ, ಎಸ್.ಸಿ ಮೋರ್ಚಾ ವತಿಯಿಂದ ಪೇಟೆಯಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ನೇತೃತ್ವ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್‌ರವರು ಮಾತನಾಡಿದರು. ರಾಜ್ಯ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ದಿನಕರ್ ಬಾಬು, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಉಪಾಧ್ಯಕ್ಷ ಸದಾನಂದ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕ್ಷೇತ್ರ ಕಾರ್ಯದರ್ಶಿ ಎಂ.ಜಿ. ನಾಗೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್, ಜಿಲ್ಲಾ ಎಸ್.ಸಿ ಮೋರ್ಚಾ, ಎಸ್.ಸಿ ಮೋರ್ಚಾ ಪ್ರಮುಖರಾದ ಪಾರ್ಥ ಸಾರಥಿ, ಚಂದ್ರ ಮಲ್ಲಾರು, ಕಾರ್ಯಾಲಯ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಲ್ಲಾರು, ಜನ ಪ್ರತಿನಿಧಿಗಳು, ಪಕ್ಷದ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT