ADVERTISEMENT

ಉಡುಪಿ: ಹುಲಿಗೆ ರಕ್ತದ ರುಚಿ ಸಿಕ್ಕಿದೆ: ಬಿ.ಎಲ್. ಸಂತೋಷ್

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 7:17 IST
Last Updated 4 ಅಕ್ಟೋಬರ್ 2025, 7:17 IST
PRASHANTH HG
   PRASHANTH HG

ಉಡುಪಿ: ‘ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವೈಚಾರಿಕ ಆಕ್ರಮಣ ನಾವು ಎದುರಿಸುತ್ತಿರುವ ಸವಾಲು. ಮುಂದೆ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯಬಹುದು, ಏಕೆಂದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.

ನಗರದ ಗುಂಡಿಬೈಲ್‌ನಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿದರು.

‘ಈವರೆಗೂ ನಡೆದಿರತಕ್ಕ ಆಕ್ರಮಣಗಳಿಗೆ ಏನು ಶಿಕ್ಷೆ ಆಗಬೇಕೋ ಅದು ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಬೇಕು’ ಎಂದು ಹೇಳಿದರು.

ADVERTISEMENT

‘ಕುಂಭಮೇಳ ಕುರಿತು ಸಾಕಷ್ಟು ಅಪಪ್ರಚಾರ ನಡೆದವು. ಆದರೆ ದೇಶದಲ್ಲಿ ಗಟ್ಟಿಯಾದ ನಂಬಿಕೆ ಇದೆ. ಅಪ ಪ್ರಚಾರ ಮಾಡಿದಷ್ಟೂ ಅಲ್ಲಿಗೆ ಹೆಚ್ಚು ಜನರು ಹೋಗಿದ್ದಾರೆ’ ಎಂದರು.

‘ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ’ ಎಂದೂ ಹೇಳಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುನಿಲ್‌ ಕುಮಾರ್‌, ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ್‌ ಗಂಟಿಹೊಳೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.