ADVERTISEMENT

ಬಿಜೆಪಿಯ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 6:24 IST
Last Updated 19 ಆಗಸ್ಟ್ 2025, 6:24 IST
<div class="paragraphs"><p>ಮಹೇಶ ಶೆಟ್ಟಿ ತಿಮರೋಡಿ</p></div>

ಮಹೇಶ ಶೆಟ್ಟಿ ತಿಮರೋಡಿ

   

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್‌ ಶೆಟ್ಟಿ ಅವರು ಸಂತೋಷ್‌ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಅದರಂತೆ 196(1), 352, 353(2) ಬಿಎನ್‌ಎಸ್‌ ಅಡಿಯಲ್ಲಿ ಮಹೇಶ್‌ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.