
ಬ್ರಹ್ಮಾವರ: ಆರೋಗ್ಯವಂತ ವ್ಯಕ್ತಿ ಕನಿಷ್ಠ ವರ್ಷಕ್ಕೊಮ್ಮೆ ರಕ್ತದಾನ ಮಾಡಿದಲ್ಲಿ ಆ ವ್ಯಕ್ತಿಯ ಜೀವನ ಉಲ್ಲಾಸ ಮತ್ತು ಲವಲವಿಕೆಯಿಂದ ಕೂಡಿರುತ್ತದೆ ಎಂದು ಕುಂದಾಪುರ ರೆಡ್ ಕ್ರಾಸ್ ಮತ್ತು ರಕ್ತನಿಧಿ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ ಹೇಳಿದರು.
ಬಾರ್ಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬಾರ್ಕೂರು ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಬಾರ್ಕೂರು ಕಾಲೇಜಿನ ಐಕ್ಯುಎಸಿ, ಯುವ ರೆಡ್‌ಕ್ರಾಸ್, ಎನ್.ಎಸ್.ಎಸ್ ಮತ್ತು ರೋವರ್ಸ್ ಮತ್ತು ರೇಂಜರ್ಸ್ ಸಹಯೋಗದಲ್ಲಿ ಮಂಗಳವಾರ ನಡೆದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಸಲ್ವಾಡಿ ಅಧ್ಯಕ್ಷತೆ ವಹಿಸಿದ್ದರು. ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷೆ ಕಿಶೋರಿ ಶೆಟ್ಟಿ, ಲಯನ್ಸ್ ಅಧ್ಯಕ್ಷ ಸುದರ್ಶನ ಶೆಟ್ಟಿ ಮೊಳಹಳ್ಳಿ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶೋಭಾ ಆರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಇದ್ದರು.
ಶೈಲಜಾ ಸ್ವಾಗತಿಸಿದರು. ಸತೀಶ್ ವಂದಿಸಿದರು. ವೀರೇಶ್ ಮಠಪತಿ ನಿರೂಪಿಸಿದರು. ಶಿಬಿರದಲ್ಲಿ ಒಟ್ಟು 60 ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.