ADVERTISEMENT

ಕುಂದಾಪುರ | ಯುವ ಬಂಟರ ಸಂಘದಿಂದ ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 5:59 IST
Last Updated 28 ನವೆಂಬರ್ 2025, 5:59 IST
ಯುವ ಬಂಟರ ಸಂಘ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು 
ಯುವ ಬಂಟರ ಸಂಘ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು    

ಕುಂದಾಪುರ: ತಾಲ್ಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ.ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಭಾಪತಿ ಎಸ್.ಜಯಕರ ಶೆಟ್ಟಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೊರಿಯಲ್ ಟ್ರಸ್ಟ್‌ನ ಬಿ.ಉದಯ್ ಕುಮಾರ್ ಹೆಗ್ಡೆ, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಬಿ.ಅರುಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತ್ರ ಸಂಘದ ಮಾಜಿ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಹೇಶ ಹೆಗ್ಡೆ ಮೊಳಹಳ್ಳಿ, ಯುವ ಬಂಟರ ಸಂಘದ ಮಹಾ ಪೋಷಕ ಅರುಣ್ ಕುಮಾರ್ ಹೆಗ್ಡೆ ಯಡಾಡಿ-ಮತ್ಯಾಡಿ, ವಿಜಯ ಶೆಟ್ಟಿ ಸಟ್ವಾಡಿ, ಜಡ್ಡಾಡಿ ವಿಜಯ ಶೆಟ್ಟಿ, ನವೀನ್ ಹೆಗ್ಡೆ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ.ಕೊತ್ತಾಡಿ ಉಮೇಶ ಶೆಟ್ಟಿ, ರೋಟರಿ ಕ್ಲಬ್ ಮಿಡ್ ಟೌನ್ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹೊಸಮಠ, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿದರ ಶೆಟ್ಟಿ, ಕೋಶಾಧಿಕಾರಿ ಭರತ್ ರಾಜ್ ಶೆಟ್ಟಿ ಜಾಂಬೂರು,ಕಾರ್ಯಕ್ರಮದ ಸಂಚಾಲಕ ಪ್ರಶಾಂತ್ ಶೆಟ್ಟಿ ಶಿರೂರು ಇದ್ದರು.

ಉಡುಪಿ ಜಿಲ್ಲಾ ರಾಜ್ಯೋತ್ಸವ ಹಾಗೂ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಂಟ ಸಮಾಜದ ಸಾಧಕರನ್ನು ಅಭಿನಂದಿಸಲಾಯಿತು. 9 ಮಂದಿ ಅನಾರೋಗ್ಯ ಪೀಡಿತರಿಗೆ ₹90,000 ಸಹಾಯಧನದ ಚೆಕ್ ವಿತರಿಸಲಾಯಿತು. ಸಂಘದ ಉಪಾಧ್ಯಕ್ಷ ರಾಜೀವ ಶೆಟ್ಟಿ ನಿಡೂಟಿ ನಿರೂಪಿಸಿದರು, ಉಪನ್ಯಾಸಕ ರಾಜೇಶ್ ಶೆಟ್ಟಿ ವಕ್ವಾಡಿ ವಂದಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.