ADVERTISEMENT

ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್‌: 17ರಿಂದ ಪ್ರವಾಸಿಗರಿಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 14:28 IST
Last Updated 15 ಡಿಸೆಂಬರ್ 2020, 14:28 IST
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನೋಟ
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನೋಟ   

ಉಡುಪಿ: ಪಡುಬಿದ್ರಿ ಬ್ಲೂಫ್ಲಾಗ್ ಬೀಚ್‌ ಡಿ.17ರಿಂದ ಪ್ರವಾಸಿಗರಿಗೆ ಮುಕ್ತವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಪ್ರವಾಸಿಗರು ಕಡಲ ತೀರಗಳ ಸುಂದರ ಚಟುವಟಿಕೆಗಳನ್ನು ಆಸ್ವಾದಿಸಲು ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್ ಅನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹೊಂದಿರುವ ಸುಸಜ್ಜಿತ ಬೀಚ್‌ ಆಗಿ ಅಭಿವೃದ್ಧಿಪಡಿಸಿದೆ. ಪ್ರವಾಸಿಗರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಬೀಚ್‌ನಲ್ಲಿ ಬ್ಯಾಂಬೂ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಾರಣ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿತ್ತು. ಇದೀಗ ಕಾಮಗಾರಿ ಮುಕ್ತಾಯವಾಗಿದ್ದು, ಮತ್ತೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಬ್ಲೂಫ್ಲಾಗ್ ಬೀಚ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT