ADVERTISEMENT

ಮಕ್ಕಳಿಗೆ ಪುಸ್ತಕ ವಿತರಣೆ: ಸನ್ಮಾನ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 13:02 IST
Last Updated 26 ಜೂನ್ 2025, 13:02 IST
ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ನೋಟ್ಸ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಪ್ರಸನ್ನ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು
ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ನೋಟ್ಸ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಪ್ರಸನ್ನ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು   

ಹೆಬ್ರಿ: ಭೂತುಗುಂಡಿ ಚಂದ್ರಶೇಖರ ಹೆಗ್ಡೆ ಮತ್ತು ಎಳಗೋಳಿ ಕೃಷ್ಣಮ್ಮ ಶೆಟ್ಟಿ ಅವರ ಸ್ಮರಣಾರ್ಥ ಪುತ್ರ ಪ್ರಸನ್ನ ಚಂದ್ರಶೇಖರ ಶೆಟ್ಟಿ ಅವರು, ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ನೋಟ್ಸ್ ಪುಸ್ತಕಗಳನ್ನು ವಿತರಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅರ್ಚಕ ಸದಾಶಿವ ಉಪಾಧ್ಯಾಯ ಸೂರಿಮಣ್ಣು, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಆರ್., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಗ್ರಾ.ಪಂ. ಸದಸ್ಯೆ ತಾರಾವತಿ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲಾ, ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಭಾಸ್ಕರ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದ ಹೆಬ್ರಿ ತಾಲ್ಲೂಕು ಉಪಾಧ್ಯಕ್ಷ ಶಂಕರ ಶೆಟ್ಟಿ, ಪಡುಕುಡೂರು ಘಟಕದ ಸೇವಾ ಪ್ರತಿನಿಧಿ ಚಿತ್ರ ಪೂಜಾರಿ, ಶಿಕ್ಷಕಿಯರಾದ ಶಾಲಿನಿ ಸುಕುಮಾರ್ ಆಚಾರ್ಯ, ಭಾವನಾ, ಸುಜಾತಾ, ಅಂಗನವಾಡಿ ಕಾರ್ಯಕರ್ತೆ ಸವಿತಾ ಶೆಟ್ಟಿ, ಸಹಾಯಕಿ ಅಶ್ವೀತ ಇದ್ದರು. ಮುಖ್ಯ ಶಿಕ್ಷಕ ಹರೀಶ್ ಪೂಜಾರಿ ಸ್ವಾಗತಿಸಿದರು. ಅತಿಥಿ ಶಿಕ್ಷಕ ಸುದರ್ಶನ್ ಶೆಟ್ಟಿ ನಿರೂಪಿಸಿದರು. ಸಹಶಿಕ್ಷಕಿ ಶೃತಿ ವಂದಿಸಿದರು. ಈ ಸಂದರ್ಭದಲ್ಲಿ ದಾನಿ ಪ್ರಸನ್ನ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT