
ಬ್ರಹ್ಮಾವರ: ಇಲ್ಲಿನ ಮಹೇಶ ಆಸ್ಪತ್ರೆ ಎದುರುಗಡೆ ರಾಷ್ಟ್ರೀಯ ಹೆದ್ದಾರಿ-66ರ ಸಂಬಂಧಿತ ಸರ್ವಿಸ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಕಾಮಗಾರಿಯ ಗುಣಮಟ್ಟ, ಸಾರ್ವಜನಿಕರ ಸಂಚಾರಕ್ಕೆ ಉಂಟಾಗುವ ಅಡಚಣೆಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಎನ್.ಎಚ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸ್ಥಳೀಯ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಹಾಗೂ ಕಾಮಗಾರಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸಂಸದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿತ್ಯಾನಂದ ಬಿ.ಆರ್. ಹಾಗೂ ಪಂಚಾಯಿತಿ ಸದಸ್ಯರು, ಸ್ಥಳೀಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.