
ಬ್ರಹ್ಮಾವರ: ಮನುಷ್ಯನ ಜೀವನೋಪಾಯಕ್ಕೆ ಬೇಕಾಗುವ ಎಲ್ಲ ವ್ಯವಸ್ಥೆಗಳು ಸಹಕಾರ ಕ್ಷೇತ್ರದಿಂದಲೇ ಸಿಗುವ ಕಾಲ ಸದ್ಯದಲ್ಲೇ ಬರಲಿದೆ. ಸಹಕಾರ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಮಂದಾರ್ತಿಯಲ್ಲಿ ಶುಕ್ರವಾರ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಮಂದಾರ್ತಿ ಸೇವಾ ಸಹಕಾರ ಸಂಘ, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಆಶ್ರಯದಲ್ಲಿನಡೆದ ಅಖಿಲ ಭಾರತ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಗಣನಾಥ ಶೆಟ್ಟಿ ಎಕ್ಕಾರ್ ದಿಕ್ಸೂಚಿ ಭಾಷಣ ಮಾಡಿ ಗ್ರಾಮೀಣ ಪ್ರದೇಶದ ಜನತೆ ಸ್ವಾವಲಂಬಿಗಳಾಗಿ ಬದುಕಬೇಕೇಂಬುದೇ ಸಹಕಾರ ಕ್ಷೇತ್ರದ ಮೂಲ ಉದ್ದೇಶ. ಸಹಕಾರ ಕ್ಷೇತ್ರಗಳು ಸ್ವಾವಲಂಬಿಗಳಾಗಬೇಕಿದ್ದಲ್ಲಿ ಡಿಜಟಲೀಕರಣದ ಅಗತ್ಯ ಎಂದರು.
ಮಂದಾರ್ತಿ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ಶೇಡಿಕೊಡ್ಲು ವಿಠಲ ಶೆಟ್ಟಿ, ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿ ಕೆ. ಆರ್. ಲಾವಣ್ಯ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಉಪಾಧ್ಯಕ್ಷ ಅಶೋಕ ಕುಮಾರ್, ನಿರ್ದೇಶಕರಾದ ಸುಧೀರ ಕುಮಾರ್ ಪಡುಬಿದ್ರಿ, ಸುರೇಶ,ಹರೀಶ ಕಿಣಿ, ಕರುಣಾಕರ ಶೆಟ್ಟಿ, ಅನಿಲ್ ಕುಮಾರ್, ಮಂದಾರ್ತಿ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಮತ್ತು ನಿರ್ದೇಶಕರು ಇದ್ದರು.
ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಗಂಗಾಧರ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ನ್ಯಾಯವಾದಿ ಶ್ರೀಧರ ಪಿ.ಎಸ್ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ವಂದಿಸಿದರು.
ಕಂಬಳದ ಕೋಣಗಳಿಗೆ ಜಯಕರ ಶೆಟ್ಟಿ ಇಂದ್ರಾಳಿ ಅವರು ಮೇವು ನೀಡಿದರು. ಮಹಿಳೆಯರು ಪೊಡಿಮಂಚಕ್ಕೆ ಭತ್ತದ ತೆನೆ ಬಡಿದರು. ಕೋಳಿ ಅಂಕ ಕಾರ್ಯಕ್ರಮಕ್ಕೆ ಮೆರುಗು ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.